ಬೆಂಗಳೂರು: ರಾಜಸ್ಥಾನದಿಂದ (Rajasthan) ಬೆಂಗಳೂರಿಗೆ (Bengaluru) ನಾಯಿ ಮಾಂಸ (Dog Meat) ಸಾಗಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ (Puneeth Kerehalli) ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಶನಿವಾರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಯಿತು.
Advertisement
ಹಿಂದೂ ಸಂಘಟನೆಗಳ ಒಕ್ಕೂಟದ (Federation of Hindu Organizations) ಮೋಹನ್ ಗೌಡ ಪೊಲೀಸ್ ಆಯುಕ್ತರಿಗೆ ದೂರು ನೀಡಿದರು. ಶುಕ್ರವಾರ ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ (Mejestic Railway Station) ಟನ್‌ಗಟ್ಟಲೆ ಅಕ್ರಮವಾಗಿ ಮಾಂಸ ಬಂದಿದೆ. ಅವರ ಬಳಿ ಲೈಸೆನ್ಸ್ ಇಲ್ಲ ಎಂದು ಫುಡ್ ಕಮಿಷನರ್ ಹೇಳಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಪುನೀತ್ ಕೆರೆಹಳ್ಳಿ ಮೇಲೆ 3 ಎಫ್‌ಐಆರ್ ದಾಖಲು ಮಾಡಿದ್ದಾರೆ. ಸಾಮಾಜಿಕ ಕರ್ತವ್ಯ ಮೆರೆದವರ ಮೇಲೆ ದೂರು ದಾಖಲಾಗಿದೆ. ಹಿಂದೂಗಳ ವಾಕ್ ಸ್ವಾತಂತ್ರ್ಯವನ್ನು ಸರ್ಕಾರ ಹರಣ ಮಾಡುತ್ತಿದೆ. ದೂರುದಾರರಿಂದ ರಕ್ಷಣೆ ಇಲ್ಲದಂತಾಗಿದೆ. ಈ ಕುರಿತು ಸೂಕ್ತ ತನಿಖೆ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಕಮರಿಗೆ ಉರುಳಿದ ಕಾರು – ಐವರು ಮಕ್ಕಳು ಸೇರಿ ಒಂದೇ ಕುಟುಂಬದ 8 ಮಂದಿ ದುರ್ಮರಣ!
Advertisement
Advertisement
ಪ್ರಕರಣ ಏನು?
ರಾಜಸ್ಥಾನದಿಂದ ಬೆಂಗಳೂರಿಗೆ ಮೇಕೆ, ಕುರಿ ಮಾಂಸದ ಹೆಸರಿನಲ್ಲಿ ಅಕ್ರಮವಾಗಿ ನಾಯಿ ಮಾಂಸ ತರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಶುಕ್ರವಾರ ರೈಲಿನಲ್ಲಿ ಬಂದ 90 ಬಾಕ್ಸ್ ಮಾಂಸವನ್ನು ತಡೆಯಲಾಗಿತ್ತು. ಇದರ ಉಸ್ತುವಾರಿ ಪುನೀತ್ ಕೆರೆಹಳ್ಳಿ ವಹಿಸಿಕೊಂಡಿದ್ದರು. ಬಳಿಕ ಪುನೀತ್ ಕೆರೆಹಳ್ಳಿ ಹಾಗೂ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ನಡುವೆ ವಾಗ್ವಾದ ಕೂಡ ನಡೆದಿತ್ತು. ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಶನಿವಾರ ಪೊಲೀಸರ ವಶದಲ್ಲಿದ್ದ ಪುನೀತ್ ತೀವ್ರ ಅಸ್ವಸ್ಥಗೊಂಡು ವಿಕ್ಟೋರಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ನಾಯಿ ಸ್ವಲ್ಪ ಟಚ್ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್ ರಜಾಕ್
Advertisement