ಬೆಂಗಳೂರು: ಮಹಿಳೆಯ ಮೇಲೆ ಅತ್ಯಾಚಾರ (Rape) ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ (Telangana) ಕಾಂಗ್ರೆಸ್ (Congress) ಮುಖಂಡ ಕುಂಭಂ ಶಿವಕುಮಾರ್ ರೆಡ್ಡಿಗೆ (Kumbam Shivakumar Reddy) ಕಬ್ಬನ್ ಪಾರ್ಕ್ (Cubbon Park) ಪೊಲೀಸರು ನೋಟಿಸ್ ನೀಡಿದ್ದಾರೆ.
ವಾಟ್ಸಪ್ ಮೂಲಕ ಶಿವಕುಮಾರ್ ರೆಡ್ಡಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ (Notice) ಕಳುಹಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಈ ಕುರಿತು ಕುಂಭಂ ಶಿವಕುಮಾರ್ ರೆಡ್ಡಿ ವಿಚಾರಣೆಗೆ ಹಾಜರಾಗಲು ಒಂದು ವಾರ ಸಮಯಾವಕಾಶವನ್ನು ಕೇಳಿದ್ದಾರೆ. ಇದನ್ನೂ ಓದಿ: ಅತಿಥಿ ಶಿಕ್ಷಕಿ, ವಿದ್ಯಾರ್ಥಿನಿಯರಿಗೆ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ
Advertisement
Advertisement
ಕುಂಭಂ ಶಿವಕುಮಾರ್ ರೆಡ್ಡಿ ತೆಲಂಗಾಣದ ನಾರಾಯಣಪೇಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಬೆಂಗಳೂರಿನ (Bengaluru) ಖಾಸಗಿ ಹೋಟೆಲ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು. ಇದನ್ನೂ ಓದಿ: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಎಂ.ಕೆ ಸ್ಟಾಲಿನ್ ಪುತ್ರನಿಂದ ವಿವಾದಾತ್ಮಕ ಹೇಳಿಕೆ
Advertisement
Advertisement
ಮಹಿಳೆಯ ದೂರಿನ ಆಧಾರದ ಮೇಲೆ ಶಿವಕುಮಾರ್ ರೆಡ್ಡಿ ಮೇಲೆ ಎಫ್‌ಐಆರ್ ದಾಖಲಿಸಿಕೊಂಡ ಕಬ್ಬನ್‌ಪಾರ್ಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆಯೂ ಅವರ ವಿರುದ್ಧ ಹೈದರಾಬಾದ್‌ನ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ತಮಿಳುನಾಡಿಗೆ ನೀರು – KRS ಡ್ಯಾಂನಲ್ಲಿ 5 ದಿನಕ್ಕೆ 2 TMC ನೀರು ಖಾಲಿ
Web Stories