ಬೆಂಗಳೂರು: ಫುಡ್ ಡೆಲಿವರಿ ಬಾಯ್ (Food Delivery Boy) ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ತಡವಾಗಿ ಬೆಳಕಿಗೆ ಬಂದಿದ್ದು, ಇಲ್ಲಿನ ಹೆಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಡೆಲಿವರಿ ಬಾಯ್ ಬಿ.ಆಕಾಶ್ ವಿರುದ್ಧ ದೂರು ದಾಖಲಾಗಿದೆ.
ನಡೆದಿದ್ದೇನು?
ಕಳೆದ ಮಾರ್ಚ್ 17ರಂದು (ಭಾನುವಾರ) ಸಂಜೆ 6:30ರ ವೇಳೆಗೆ ಹೆಚ್‌ಎಎಲ್ ಪೊಲೀಸ್ ಠಾಣಾ (HAL Police Station) ವ್ಯಾಪ್ತಿಯ ಮನೆಯೊಂದಕ್ಕೆ ಫುಡ್ ಡೆಲಿವರಿ ನೀಡಲು ಹೋಗಿದ್ದ. ಫುಡ್ ನೀಡಿದ ಬಳಿಕ ವಾಶ್ ರೂಂ ಉಪಯೋಗಿಸಲು ಮನವಿ ಮಾಡಿ, ಮನೆಯೊಳಕ್ಕೆ ಎಂಟ್ರಿಕೊಟ್ಟಿದ್ದಾನೆ. ಇದನ್ನೂ ಓದಿ: ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಟ್ವಿಸ್ಟ್ – ಲವ್ ಜಿಹಾದ್‌ಗೆ ಮುಂದಾಗಿದ್ದ, ಮತಾಂತರಕ್ಕೆ ಯತ್ನಿಸಿದ್ದನಂತೆ ಯುವಕ
ಬಳಿಕ ಯುವತಿಗೆ ಕುಡಿಯಲು ನೀರು ಕೊಡುವಂತೆ ಕೇಳಿದ್ದಾನೆ. ಆಕೆ ನೀರು ತರಲು ಒಳಗೆ ಹೋದಾಗ ತಾನೂ ಹಿಂಬಾಲಿಸಿ ಹೋಗಿದ್ದಾನೆ. ನಂತರ ಯುವತಿಯ ಕೈ ಹಿಡಿದು ಎಳೆದಾಡಿದ್ದಾನೆ, ಅನುಚಿತವಾಗಿ ವರ್ತಿಸಿದ್ದಾನೆ.
ಘಟನೆ ಸಂಬಂಧ ಯುವತಿ ಹೆಚ್‌ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಯುವತಿ ನೀಡಿದ ದೂರಿನ ಅನ್ವಯ ಪೊಲೀಸರು ಐಪಿಸಿ ಸೆಕ್ಷನ್ 354-ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಚ್ಚೇಗೌಡ ರಾಜೀನಾಮೆ