ಯಾದಗಿರಿ: ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆಂದು ಹೋಗಿದ್ದ ವಿಧಾನ ಪರಿಷತ್ ಮಾಜಿ ಸಭಾಪತಿ ಒಬ್ಬರ ಮೇಲೆ ಬಿಜೆಪಿ ಕಾರ್ಯಕರ್ತ (BJP Activists) ರಿಂದ ದಾಳಿಯಾಗಿರುವ ಆರೋಪ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಕೇಳಿ ಬಂದಿದೆ.
Advertisement
ವಿಧಾನ ಪರಿಷತ್ ಮಾಜಿ ಸಭಾಪತಿ ಡೆವಿಡ್ ಸಿಮನ್ (David Simeon) ವಾಹನ ಮೇಲೆ ದಾಳಿ ನಡೆದಿದ್ದು, ಕಾರಿನ ಗಾಜು ಪುಡಿ ಪುಡಿಯಾಗಿದೆ. ಸುರಪುರದ ಡೊಣ್ಣಿಗೇರೆ ಬಡಾವಣೆಯಲ್ಲಿ ಸುರಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ (Congress Candidate) ರಾಜಾ ವೆಂಕಟಪ್ಪ ನಾಯಕ ಪರ ಡೆವಿಡ್ ಸಿಮನ್ ಪ್ರಚಾರಕ್ಕೆ ತೆರಳಿದ್ರು. ಈ ವೇಳೆ ಎಂಟತ್ತು ಜನರಿದ್ದ ಬಿಜೆಪಿ ಕಾರ್ಯಕರ್ತರ ಗುಂಪಿನಿಂದ ಏಕಾಏಕೀ ದಾಳಿ ಮಾಡಿ ಹಲ್ಲೆ ಮಾಡಿದೆ ಎನ್ನಲಾಗಿದ್ದು, ಈ ಸಂಬಂಧ ಸುರಪುರ ಪೊಲೀಸ್ ಠಾಣೆ (Surapura Police Station) ಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement
ಈ ಹಿಂದೆಯೂ ಇದೇ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕಲ್ಲು ತೂರಾಟದಿಂದಾಗಿ 15ಕ್ಕೂ ಹೆಚ್ಚು ವಾಹನಗಳು ಜಖಂ ಆಗಿ, ನಾಲ್ಕೈದು ಕಾರ್ಯಕರ್ತರಿಗೆ ಗಾಯಗಳಾಗಿತ್ತು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಕಲ್ಲು ತೂರಾಟದ ದಾಳಿ ನಡಿದಿರೋದ್ರಿಂದ ಸುರಪುರ ಕ್ಷೇತ್ರದ ಜನ ಆತಂಕದಲ್ಲಿದ್ದಾರೆ. ಇದನ್ನೂ ಓದಿ: ಕೆ.ಆರ್.ನಗರದಲ್ಲಿ ಸಾ.ರಾ.ಮಹೇಶ್ ಪುತ್ರನ ಕಾರಿಗೆ ಕಲ್ಲೇಟು- ಬೆಂಗ್ಳೂರಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ
Advertisement