ಮೈಸೂರು: ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು (Nanjangud) ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.
ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ (Micro Finance) ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ ಸಾಲ ಪಡೆದಿದ್ದರು. ಪ್ರತಿ ತಿಂಗಳು 20,000ಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು. ಸಾಲದಲ್ಲಿ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿತ್ತು. ಈ ಹಿನ್ನೆಲೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಈ ಹಿನ್ನೆಲೆ ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: BBK 11 Finale| 50 ಲಕ್ಷದಲ್ಲಿ ಹನುಮಂತಗೆ ಎಷ್ಟು ಹಣ ಸಿಗುತ್ತೆ?
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಂತರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ. ಇದನ್ನೂ ಓದಿ: ಕಬ್ಬಿಣದ ಪೈಪ್ ತುಂಬಿದ್ದ ಲಾರಿ ಪಲ್ಟಿ; ತುಮಕೂರು – ಬೆಂಗಳೂರು ಹೈವೇಯಲ್ಲಿ ಭಾರೀ ಟ್ರಾಫಿಕ್