ನವದೆಹಲಿ: ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸೋನು ಸೂದ್ ಅವರ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದೆ.
ಮುಂಬೈ ಕಚೇರಿ ಮತ್ತು ಲಕ್ನೋದಲ್ಲಿರುವ ಕಂಪನಿ ಸೇರಿದಂತೆ ಒಟ್ಟು ಆರು ಕಡೆ ಈ ದಾಳಿ ನಡೆದಿದೆ. ಸೋನು ಸೂದ್ ಕಂಪನಿ ಮತ್ತು ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವಿನ ಇತ್ತೀಚಿಗೆ ಒಪ್ಪಂದ ನಡೆದಿತ್ತು. ಈ ಒಪ್ಪಂದದ ವೇಳೆ ತೆರಿಗೆ ವಂಚನೆ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
ಸೋನು ಸೂದ್ ಮೇಲೆ ಐಟಿ ದಾಳಿ ನಡೆಯುತ್ತಿರುವುದು ಇದೇ ಮೊದಲೆನಲ್ಲ. ಈ ಹಿಂದೆ 2012 ರಲ್ಲಿ ತೆರಿಗೆ ವಂಚನೆ ಆರೋಪದ ಮೇಲೆ ದಾಳಿ ನಡೆದಿತ್ತು.
Advertisement
ರಾಜಕೀಯ ಪಕ್ಷಗಳು ಸೋನು ಸೂದ್ ಮೇಲಿನ ಐಟಿ ದಾಳಿಯನ್ನು ಖಂಡಿಸಿವೆ. ಆಪ್ ನಾಯಕ ರಾಘವ್ ಚಡ್ಡಾ ಪ್ರತಿಕ್ರಿಯಿಸಿ, ಬಡವರಿಗೆ ಸಹಾಯ ಮಾಡಿ ಲಕ್ಷಾಂತರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ಸೋನು ಸೂದ್ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮಾಜಿ ಗಂಡನ ಹೇಳಿಕೆಯಿಂದ ಚೀನಾದ ಖ್ಯಾತ ನಟಿಗೆ ಬಿತ್ತು 340 ಕೋಟಿ ರೂ. ದಂಡ
Advertisement
ರಾಜಕೀಯ ಪಕ್ಷಗಳ ಟೀಕೆ ಬಿಜೆಪಿ ವಕ್ತಾರ ಆಸಿಫ್ ಭಮ್ಲಾ ಪ್ರತಿಕ್ರಿಯಿಸಿ, ಐಟಿ ದಾಳಿಗೂ ಕೇಜ್ರಿವಾಲ್ ಜೊತೆಗಿನ ಭೇಟಿಗೂ ಯಾವುದೇ ಸಂಬಂಧವಿಲ್ಲ. ಯಾವುದೇ ವ್ಯಕ್ತಿ ಯಾರನ್ನೂ ಭೇಟಿ ಮಾಡಬಹುದು. ಆದಾಯ ತೆರಿಗೆ ಇಲಾಖೆ ಸ್ವತಂತ್ರವಾಗಿದ್ದು ತನ್ನದೇ ಆದ ಶಿಷ್ಟಾಚಾರವನ್ನು ಹೊಂದಿದೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಅಮ್ಮ ನೀವು ಸೂಪರ್ ವುಮೆನ್ – ಹಾಡಿ ಹೊಗಳಿದ ರಾಧಿಕಾ ಪಂಡಿತ್
48 ವರ್ಷದ ಸೋನ್ ಸೂದ್ ಎರಡು ದಶಕಗಳಿಂದ ಚಲನ ಚಿತ್ರರಂಗದಲ್ಲಿದ್ದಾರೆ. ಕೋವಿಡ್ 19 ಸಮಯದಲ್ಲಿ ಅವರು ನೀಡಿದ ಸಹಾಯ ಕಾರ್ಯ ದೇಶದೆಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿತ್ತು. ದೆಹಲಿ ಸರ್ಕಾರ ಕೆಲ ದಿನಗಳ ಹಿಂದೆ ಶಾಲಾ ವಿದ್ಯಾರ್ಥಿಗಳಿಗೆ ಆರಂಭಿಸಿರುವ ಮಾರ್ಗದರ್ಶನ ಕಾರ್ಯಕ್ರಮದ ರಾಯಭಾರಿಯಾಗಿ ಸೋನು ಸೂದ್ ಅವರನ್ನು ಆಯ್ಕೆ ಮಾಡಿತ್ತು.