ಕಲಬುರಗಿ: ಶಹಬಾದ ತಾಲೂಕಿನ ಮರತೂರ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.
ಮಂಜುನಾಥ್ ಅಲಿಯಾಸ್ ಮನೋಜ್ ಸಿಂದೆ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮನೋಜ್ ಅವರ ಪತ್ನಿಯ ಅಣ್ಣ ಮತ್ತು ಆತನ ಪತ್ನಿಯ ನಡುವೆ ಕೌಟುಂಬಿಕ ಕಲಹ ಇದೆ ಎನ್ನಲಾಗಿದೆ. ಈ ನಡುವೆ ಅಣ್ಣನ ಮಗು ಕಾಣೆಯಾಗಿದೆ. ಮಗು ಕಾಣೆಯಾಗಲು ನೀವೇ ಕಾರಣ ಅಂತ ಮನೋಜ್ ಹಾಗೂ ಅವರ ಪತ್ನಿ ಹೆಸರಿನಲ್ಲಿ ಠಾಣೆಗೆ ದೂರು ನೀಡಲಾಗಿತ್ತು. ಇದನ್ನೂ ಓದಿ: ತೃತೀಯ ರಂಗ ರಚನೆಗೆ ದೇವೇಗೌಡರ ಜೊತೆ ಚಂದ್ರಶೇಖರ್ ರಾವ್ ಚರ್ಚೆ
Advertisement
Advertisement
ದೂರಿನ ಹಿನ್ನೆಲೆ ಆತನನ್ನು ಠಾಣೆಗೆ ಎಳೆದೊಯ್ದ ಪೊಲೀಸರು, ಎರಡು ದಿನ ಠಾಣೆಯಲ್ಲಿ ಕೂಡಿ ಹಾಕಿ ಮನಬಂದಂತೆ ಥಳಿಸಿದ್ದಾರೆ. ಈ ವೇಳೆ ವ್ಯಕ್ತಿಯು ಮಗುವಿನ ನಾಪತ್ತೆಯಲ್ಲಿ ನಮ್ಮ ಕೈವಾಡ ಇಲ್ಲ ಅಂತ ಹೇಳಿದರೂ ಕೇಳದ ಪೊಲೀಸರು ಇವತ್ತು ನಿನ್ನನ್ನು ಮಾತ್ರ ಎಳೆದು ತಂದಿದ್ದೇವೆ. ನಾಳೆ ನಿನ್ನ ಹೆಂಡತಿಯನ್ನೂ ಕೂಡ ಎಳೆದು ತರುತ್ತೇವೆ ಅಂತ ಅವಾಜ್ ಹಾಕಿದ್ದಾರೆ. ಪೊಲೀಸರ ದೌರ್ಜನ್ಯ, ಹೊಡೆತದಿಂದ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸಿದ ಮನೋಜ್ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ತಲೆಗೆ 25 ಲಕ್ಷ ಬಹುಮಾನ ಘೋಷಣೆಗೆಯಾಗಿದ್ದ ನಕ್ಸಲ್ ನಾಯಕ ಶವವಾಗಿ ಪತ್ತೆ
Advertisement
Advertisement
ವಿನಾಕಾರಣ ನನ್ನ ಹಾಗೂ ನನ್ನ ಹೆಂಡತಿ ಮೇಲೆ ಪೊಲೀಸ್ ಠಾಣೆಗೆ ದೂರು ನೀಡಿ ಮರ್ಯಾದೆ ಹರಾಜು ಮಾಡಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಸಾಯಬಣ್ಣಾ ಜೋಗುರ, ಶರಣಮ್ಮ ನಾಟೀಕರ್, ಪ್ರತಿಭಾ ನಾಗೇಶ್ ಹಾಗೂ ಪ್ರತಿಭಾಳ ತಾಯಿ ನಾಲ್ವರ ಹೆಸರು ಡೆತ್‍ನೋಟ್‍ನಲ್ಲಿ ಬರೆದಿದ್ದಾರೆ.
ಘಟನೆಯ ಕುರಿತು ಮನೋಜ್ ಶವವನ್ನು ಶಹಬಾದ್ ಪೊಲೀಸ್ ಠಾಣೆ ಎದುರಿಗಿಟ್ಟು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.