ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಆಡಿಯೋ ರೆಕಾರ್ಡ್ (Audio Record) ಮಾಡಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆ, ಹೊಳೆನರಸೀಪುರ (Holenarasipura) ತಾಲೂಕಿನ ಕಡುವಿನಕೋಟೆ ಬಳಿ ನಡೆದಿದೆ.
ತಾಲೂಕಿನ ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ಯುವಕ. ಇದೇ ಗ್ರಾಮದ ಶಂಕರ, ದರ್ಶನ್, ಚೇತನ್, ದಿನೇಶ್ ಎಂಬವರು ಯುವತಿಯೊಬ್ಬಳ ವಿಚಾರದಲ್ಲಿ ನನಗೆ ಕಿರುಕುಳ ನೀಡಿದ್ದಾರೆ. ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಭಾನುವಾರ ಸಂಜೆ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಬೆಳಗಾವಿ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ
ಮೃತ ಯುವಕನ ಆಡಿಯೋ ಆಧರಿಸಿ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಕೇಸ್ ದಾಖಲಿಸಿಕೊಂಡಿದ್ದಾರೆ. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್ – ತನಿಖೆಗೆ 4 ತಂಡ ರಚನೆ

