ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ: ಡಿಕೆಶಿ ಕಾಲೆಳೆದ ಬಿಜೆಪಿ

Public TV
2 Min Read
ramya d k shivakumar

ಬೆಂಗಳೂರು: ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ, ಇದು ಅಸಹಾಯಕ ಡಿಕೆಶಿ ಅವರ ಸದ್ಯದ ಸ್ಥಿತಿ. ಡಿಕೆಶಿ ಅವರೇ ಬೆಳೆಸಿದ ರಮ್ಯಾ ಈಗ ಡಿಕೆಶಿಗೆ ಸಾಮಾಜಿಕ ಮಾಧ್ಯಮದಲ್ಲಿ ಬುದ್ಧಿ ಮಾತು ಹೇಳುತ್ತಿದ್ದಾರೆ ಎಂದು ಬಿಜೆಪಿ ಟ್ವಿಟ್ಟರ್ ಮೂಲಕ ಕೆಪಿಸಿಸಿ ಅಧ್ಯಕ ಡಿ.ಕೆ ಶಿವಕುಮಾರ್ ಅವರ ಕಾಲೆಳೆದಿದೆ.‌

BJP FLAG

ಟ್ವೀಟ್‍ನಲ್ಲಿ ಏನಿದೆ?
ರಮ್ಯಾ ಅವರನ್ನು ಭ್ರಷ್ಟಾಧ್ಯಕ್ಷರ ವಿರುದ್ಧ ಛೂಬಿಟ್ಟಿದ್ದು ಮೀರ್ ಸಾದೀಕ್ ಅವರಿರಬಹುದೇ? ಕೆಪಿಸಿಸಿ ಮನೆಯಲ್ಲಿ ಮೀರ್ ಸಾದೀಕ್ ಹಾವಳಿ ಜಾಸ್ತಿ ಆಗಿದ್ದು ನಿಜವೇ? ನೀನೇ ಸಾಕಿದ ಗಿಣಿ ಹದ್ದಾಗಿ ಕುಕ್ಕಿತ್ತಲ್ಲೋ ಎಂಬ ಸ್ಥಿತಿ ಡಿಕೆಶಿದು. ಕಾಂಗ್ರೆಸ್ ಒಂದು ಒಡೆದ ಮನೆ. ಇಲ್ಲಿ ಯಾರ ಅಭಿಪ್ರಾಯವನ್ನು ಯಾರು ಸಮರ್ಥಿಸುತ್ತಾರೆ, ಯಾರು ವಿರೋಧಿಸುತ್ತಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಎಂ.ಬಿ. ಪಾಟೀಲ್ ಹಾಗೂ ಅಶ್ವಥ್ ನಾರಾಯಣ ಅವರ ಭೇಟಿಯ ಬಗ್ಗೆ ಮಾತನಾಡಿದ ಅಸಹಾಯಕ ಡಿಕೆಶಿ ಅವರೀಗ ತಮ್ಮ ಸ್ವಂತ ಮನೆಯಲ್ಲೇ ಉಪವಾಸ ಮಾಡುವ ಸ್ಥಿತಿಯಲ್ಲಿದ್ದಾರೆ. ಹೀಗೇಕಾಯಿತು ಡಿಕೆಶಿವಕುಮಾರ್ ಅವರೇ? ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಳ್ಳುವಷ್ಟು ಡಿಕೆಶಿವಕುಮಾರ್ ಅಸಹಾಯಕರೇ? ಅಲ್ಪಸಂಖ್ಯಾತ ಸಲೀಂ ಅವರನ್ನು ಕಿತ್ತೊಗೆದು ಉಗ್ರಪ್ಪ ಜೊತೆ ಪತ್ರಿಕಾಗೋಷ್ಠಿ ಮಾಡುವ ಮೂಲಕ ಯಾವ ಸಂದೇಶ ನೀಡುತ್ತಿದ್ದೀರಿ? ನೀವೆಂತಹ ಬಂಡೆ, ಕಲ್ಲುಬಂಡೆಯೋ ಅಥವಾ ಟೊಳ್ಳು ಬಂಡೆಯೋ? ಅಸಹಾಯಕ ಡಿಕೆಶಿ. ಅಕ್ರಮ ಸಂಪಾದನೆಯ ಹಣದ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಏನೋ ಸಾಧನೆ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಅವರೀಗ ಅಸಹಾಯಕ ಡಿಕೆಶಿ ಆಗಿದ್ದಾರೆ. ಇದನ್ನೂ ಓದಿ: ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ

d k shi ramya

ಕೆಪಿಸಿಸಿ ಮನೆಯಲ್ಲಿ ಈಗ ಮೀರ್ ಸಾದೀಕ್ ಹಾವಳಿ ಜಾಸ್ತಿಯಾಗಿದ್ದು ನಿಜವೇ? ಗುಂಪುಗಾರಿಕೆ, ಬಣ, ಉಪಬಣ, ಆ ಬಣ ಈ ಬಣಗಳ ನಡುವೆಯೂ ಒಗ್ಗಟ್ಟಿನ ಮಂತ್ರವೇಕೆ? ಡಿಕೆಶಿ ವಿರುದ್ಧ ಮಾಜಿ ಸಂಸದೆ ರಮ್ಯಾ ತಿರುಗಿಬಿದ್ದಿದ್ದಾರೆ. ಅಸಹಾಯಕ ಡಿಕೆಶಿ ಅವರೇ, ನೀವೇ ಬೆಳೆಸಿದ Social Media Encounter Specialist ರಮ್ಯಾ ನೇತೃತ್ವದಲ್ಲಿ ಮತ್ತಷ್ಟು ನಕಲಿ ಖಾತೆ ಜನಿಸಲಿದ್ದು, ನಿಮ್ಮದೇ ಮೂಗಿನ ಕೆಳಗೆ ನಿಮ್ಮ ವಿರುದ್ಧವೇ ಟೂಲ್‌ ಕಿಟ್ ಹಣೆಯಲಾಗುತ್ತಿದೆ. ಇದರ ಹಿಂದೆ ಮೀರ್ ಸಾದೀಕ್ ಕೈವಾಡವಿದೆ, ಎಚ್ಚರ!.

ಮಾನ್ಯ ಡಿಕೆಶಿ ಅವರೇ, ನಿಮ್ಮ ಹೇಳಿಕೆಯನ್ನು ಪಕ್ಷದ ವೇದಿಕೆಯಲ್ಲಿ ಪ್ರಶ್ನಿಸುತ್ತೇನೆ ಎಂದು ಎಂಬಿ ಪಟೀಲ್ ಹೇಳಿದ್ದಾರೆ. ದೆಹಲಿ ವರಿಷ್ಠರ ಮುಂದೆಯೇ ನಿಮ್ಮ ನಾಯಕತ್ವದ ಪ್ರಶ್ನೆಗೆ ವೇದಿಕೆ ಸಿದ್ದವಾಗುತ್ತಿದೆಯೇ ಅಸಹಾಯಕ ಡಿಕೆಶಿ? ಚುನಾವಣೆಯ ಹೊಸ್ತಿಲಲ್ಲಿ ಡಿ.ಕೆ ಶಿವಕುಮಾರ್ ಜೊತೆ ಎಷ್ಟು ಮಂದಿ ನಿಲ್ಲಬಹುದು ಎಂದು ಕಾಂಗ್ರೆಸಿಗರು ಈಗಲೇ ನಿರ್ಧರಿಸಿರಬಹುದು. ಮೀರ್ ಸಾಧೀಕ್ ಬಣದ ಜೊತೆಗೆ ಅಸಹಾಯಕ ಡಿಕೆಶಿ ಅವರ ವಿರೋಧಿಗಳ ಸಾಲಿಗೆ ಈಗ ಮಾಜಿ ಸಂಸದೆ ರಮ್ಯಾ ಕೂಡಾ ಸೇರಿದ್ದಾರೆ. ಡಿಕೆಶಿ ಅವರೇ, ಸಹೋದರ ಡಿ.ಕೆ.ಸುರೇಶ್ ಅವರಾದರೂ ನಿಮ್ಮ ಜೊತೆ ನಿಲ್ಲಬಹುದೇ? ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ನೀವು ನಿಜಕ್ಕೂ ಕೆಪಿಸಿಸಿ ಅಧ್ಯಕ್ಷರೇ? ಸಾರ್ವಜನಿಕ ಬದುಕಿನಿಂದ ಕಳೆದು ಹೋದವರೆಲ್ಲ ಈಗ ಬಂದು ಕೆಪಿಸಿಸಿ ಅಧ್ಯಕ್ಷರಿಗೆ ಪಾಠ ಹೇಳುತ್ತಿರುವುದನ್ನು ನೋಡಿದರೆ, ಕನಕಪುರದ ಬಂಡೆ ಎಷ್ಟು ಗಟ್ಟಿ ಎಂದು ಯೋಚಿಸಬೇಕಲ್ಲವೇ? ಡಿಕೆಶಿ ಅವರನ್ನು ಅಧೀರರನ್ನಾಗಿಸುವ ಹಿಂದೆ ಮೀರ್ ಸಾದೀಕ್ ತಂತ್ರವಿದೆಯೇ?

Share This Article
Leave a Comment

Leave a Reply

Your email address will not be published. Required fields are marked *