ಮಂಗಳೂರು: ಪ್ರೀತಿಯ ಹೆಸರಲ್ಲಿ ಗರ್ಭಿಣಿಯಾಗಿಸಿ ವಂಚಿಸಿದ್ದಾನೆಂದು ಆರೋಪಿಸಿ ಡೆತ್‌ನೋಟ್ ಬರೆದಿದ್ದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಲ್ಲಿ (Mangaluru) ನಡೆದಿದೆ.
ಮಂಗಳೂರು ಹೊರವಲಯದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಂಟ್ವಾಳ ಮೂಲದ ಯುವಕನಿಂದ ವಂಚನೆ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಫೋಟೊ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಜಲಸಮಾಧಿ
ಹಿಂದೂ ಸಂಘಟನೆಯವರು ಸಹಾಯ ಮಾಡಿಲ್ಲ ಎಂದು ಬಾಲಕಿ ವಿಷಾದಿಸಿದ್ದಾಳೆ. ತುಳು ಭಾಷೆಯಲ್ಲಿ ಡೆತ್‌ನೋಟ್ ಬರೆದಿಟ್ಟು ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲೇಜಿನಿಂದ ಮರಳಿ ಬಂದು ಮನೆಯಲ್ಲಿ ನೇಣು ಬಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಡೆತ್‌ನೋಟ್‌ನಲ್ಲಿ, ನಾನು ತಪ್ಪು ಮಾಡಿದ್ದೇನೆ. ಅಮ್ಮಾ, ನನ್ನ ತಪ್ಪನ್ನು ಮನ್ನಿಸಿ ಅಮ್ಮ. ಇನ್ನು ಬದುಕಲು ಸಾಧ್ಯವಿಲ್ಲ, ನನಗೆ ಹಿಂದೂ ಸಂಘಟನೆಯವರು ಸಹಾಯ ಮಾಡಿಲ್ಲ. ನನಗೆ ಮೋಸ ಮಾಡಿ ಅವನು ಆರಾಮಾಗಿದ್ದಾನೆ. ನನ್ನ ರೀತಿ ಯಾರದ್ದೂ ಜೀವನ ಹಾಳಾಗಬಾರದು ಎಂದು ಡೆತ್‌ನೋಟ್‌ನಲ್ಲಿ ಬಾಲಕಿ ಬರೆದಿದ್ದಾಳೆ. ಬಾಲಕಿಯ ತಂದೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಕೇಸು ದಾಖಲಾಗಿದೆ. ಇದನ್ನೂ ಓದಿ: ಬಾಗಿಲು ಮುಚ್ಚುವ ವಿಚಾರಕ್ಕೆ ಜಗಳ; ಚಲಿಸುತ್ತಿದ್ದ ರೈಲಿನಲ್ಲೇ ಚಾಕುವಿನಿಂದ ಇರಿದು ಯುವಕನ ಹತ್ಯೆ
