ಬೆಂಗಳೂರು: ಸಿದ್ದರಾಮಯ್ಯನವರ (Siddaramaiah) ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ (Disqualification Petition) ಸಂಬಂಧಿಸಿದಂತೆ ಹೈಕೋರ್ಟ್ (High Court) ಸಿಎಂಗೆ ನೋಟಿಸ್ ಜಾರಿ ಮಾಡಿದೆ.
ಮೈಸೂರಿನ ವರುಣಾ (Varuna) ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆಎಂ ಶಂಕರ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಸಿದ್ದರಾಮಯ್ಯನವರಿಗೆ ವಿವರಣೆ ನೀಡುವಂತೆ ಕೋರಿ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿದೆ. ಇದನ್ನೂ ಓದಿ: Udupi College Video Row – ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ಮಂಜೂರು
Advertisement
Advertisement
ಅರ್ಜಿಯಲ್ಲಿ ಏನಿದೆ?
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ (Congress) ಗ್ಯಾರಂಟಿ ಯೋಜನೆಗಳ (Guarantee Scheme) ಮೂಲಕ ಮತದಾರರಿಗೆ ಆಮಿಷ ಒಡ್ಡಿತ್ತು. ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123 (1) ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಇದು ಪ್ರಭಾವ ಬೀರಿದ್ದು, ಇದು ಲಂಚಕ್ಕೆ ಸಮವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ನಡೆಸುವುದು ಅಪರಾಧ. ಈ ಕಾರಣಕ್ಕೆ ಅಕ್ರಮ ಎಸಗಿದ್ದರಿಂದ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು.
Advertisement
Advertisement
ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಅನುಮತಿಯನ್ನು ಪಡೆಯಲಾಗಿದ್ದು ಕಾರ್ಡ್‌ಗಳಿಗೆ ಅವರ ಸಹಿಯನ್ನು ಹಾಕಲಾಗಿದೆ. ಈ ಗ್ಯಾರಂಟಿ ಯೋಜನೆಗಳು ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲು ಮತದಾರರನ್ನು ಪ್ರೇರೇಪಿಸಿದೆ ಎಂದು ಅರ್ಜಿಯಲ್ಲಿ ಕೋರಿದ್ದಾರೆ.
Web Stories