ಬೆಂಗಳೂರು: ಸಮ್ಮಿಶ್ರ ಸರ್ಕಾರ ಬೇಡ ಎಂಬುದು ಜನರ ಆದೇಶ. ಅಲ್ಲದೆ ಸಮ್ಮಿಶ್ರ ಸರ್ಕಾರದ ಆಡಳಿತದಿಂದ ಬೇಸತ್ತು ಅವರ ಶಾಸಕರೇ ರಾಜೀನಾಮೆ ಕೊಟ್ಟಿದ್ದಾರೆ ಎಂದು ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಆರೋಪಿಸಿದ್ದಾರೆ.
ಯಡಿಯೂರಪ್ಪನವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಆಗಮಿಸಿರುವ ಶಾಸಕ ಸುಕುಮಾರ್ ಶೆಟ್ಟಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರ ಜೊತೆ ಮಾತನಾಡಿದರು.
Advertisement
ನಮ್ಮಲ್ಲಿ 105 ಶಾಸಕರಿದ್ದು, ಮೈತ್ರಿ ಸರ್ಕಾರದ 20 ಶಾಸಕರು ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಸಂಖ್ಯಾ ಬಲ ನಮ್ಮ ಪರವಾಗಿದೆ. ಮೈತ್ರಿ ನಾಯಕರು ಅವರ ಶಾಸಕರನ್ನು ಏನು ಬೇಕಾದರೂ ಮಾಡಲಿ ಎಂದು ಹೇಳುವ ಮೂಲಕ ಶಾಸಕರ ಅನರ್ಹ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
Advertisement
Advertisement
ಬಿ.ಎಸ್.ಯಡಿಯೂರಪ್ಪನವರ ಅಧಿಕಾರಾವಧಿಯಲ್ಲಿ ರಾಜ್ಯ ಸುಭೀಕ್ಷೆಯಿಂದರಲಿ ಎಂದು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಬಂದಿದ್ದೇನೆ. ಕಾಂಗ್ರೆಸ್‍ನವರು ಅವರ ಶಾಸಕರನ್ನು ಏನು ಬೇಕಾದರೂ ಮಾಡಿಕೊಳ್ಳಲಿ, ನಮ್ಮ ಬಳಿ ಸಂಖ್ಯಾಬಲವಿದೆ. ಅಲ್ಲದೆ, ಅತೃಪ್ತ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಆದರೆ ಮುಂಬೈನಲ್ಲಿರುವ ಶಾಸಕರಿಗೂ ಕಾಂಗ್ರೆಸ್‍ಗೂ ಸಂಬಂಧವಿದೆ ಎಂದು ಗುಡುಗಿದ್ದಾರೆ.
Advertisement
ಕ್ಷೇತ್ರದ ಜನತೆ ಸರ್ಕಾರ ರಚನೆ ಮಾಡಿಯೇ ಕ್ಷೇತ್ರಕ್ಕೆ ಬರಬೇಕೆಂದು ಹೇಳಿ ಕಳುಹಿಸಿದ್ದಾರೆ. ಕುಡಿಯುವ ನೀರಿಗೆ ನಮ್ಮ ಮೊದಲ ಆದ್ಯತೆ, ನಾಲ್ಕು ವರ್ಷ ಸುಭದ್ರ ಸರ್ಕಾರ ನಡೆಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು. ಬಿಎಸ್‍ವೈ ಪ್ರಮಾಣವಚನ ಸ್ವಿಕಾರ ಸಮಾರಂಭ ಹಿನ್ನೆಲೆ ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಬೆಂಗಳೂರಿಗೆ ಆಗಮಿಸಿದ್ದಾರೆ.