ಬೆಂಗಳೂರು: ಲೋಕಸಭಾ ಚುನಾವಣೆಯ ಮುಗಿದ ಬಳಿಕ ಸರ್ಕಾರದ ಕುರಿತು ಏನಾಗುತ್ತೇ ಎಂದು ನೋಡೋಣ ಎಂದು ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಧರ್ಮಸ್ಥಳದ ಶಾಂತಿವನದ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಅವಧಿಯ ಕುರಿತು ಮಾತನಾಡಿರುವ ವಿಡಿಯೋ ಲಭ್ಯವಾಗಿದೆ. ವಿಡಿಯೋದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವ್ಯಕ್ತಿಯೊಬ್ಬರೊಂದಿಗೆ ಮಾತುಕತೆ ನಡೆಸುತ್ತಿದ್ದು, ಈ ವೇಳೆ ವ್ಯಕ್ತಿ ಸರ್ಕಾರದ ಅವಧಿಯ ಕುರಿತು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಪಾರ್ಲಿಮೆಂಟ್ ಎಲೆಕ್ಷನ್ ವರೆಗೂ ಸರ್ಕಾರ ಇರುತ್ತೆ. ಪಾರ್ಲಿಮೆಂಟ್ ಎಲೆಕ್ಷನ್ ಬಳಿಕ ಏನು ಬೆಳವಣಿಗೆ ಆಗುತ್ತೆ ನೋಡೋಣ ಎಂದು ಹೇಳಿದ್ದಾರೆ.
Advertisement
Advertisement
ಸದ್ಯ ಸಿದ್ದರಾಮಯ್ಯ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಿಎಂ ಕುಮಾರಸ್ವಾಮಿ ಅವರ ಸರ್ಕಾರದ ಆಯಸ್ಸು ಒಂದೇ ವರ್ಷವೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೂ ಮುನ್ನ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದ್ಕಡೆ, ಸಿಎಂ ಕುಮಾರಸ್ವಾಮಿ ಮತ್ತೊಂದು ಕಡೆ, ಅವರೇ ಬಡಿದಾಡಿಕೊಳ್ಳುತ್ತಿದ್ದಾರೆ. ನಮಗೂ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
Advertisement
ಇದೇ ವೇಳೆ ಅಮಿತ್ ಶಾ ಭೇಟಿ ಕುರಿತು ವಿವರಿಸಿದ ಬಿಎಸ್‍ವೈ, ನಾನು ಮತ್ತೆ ಬಸವರಾಜ್ ಬೊಮ್ಮಾಯಿ ಅವರನ್ನು ಅಮಿತ್ ಶಾ ಅವರನ್ನು ಭೇಟಿಯಾಗಲು ಹೋಗಿದ್ದೆವು. ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಇದೇ ತಿಂಗಳ 29ರಂದು ರಾಜ್ಯ ಕಾರ್ಯಕಾರಣಿ ಸಭೆ ಕರೆಯಲಿದ್ದೇವೆ. ಹೀಗಾಗಿ ಅದಕ್ಕಾಗಿ ಪೂರ್ವಭಾವಿ ಸಿದ್ಧತೆ ಹಾಗೂ ಇತರ ಕೆಲವೊಂದಷ್ಟು ವಿಚಾರಗಳ ಕುರಿತು ಚರ್ಚಿಸಿದ್ದೇವೆ. ಮಾತ್ರವಲ್ಲದೇ ಸಾಧ್ಯವಾದ್ರೆ ಕಾರ್ಯಕ್ರಮಕ್ಕೆ ತಾವೇ ಬರಬೇಕು ಎಂದು ಮನವಿ ಮಾಡಿಕೊಂಡಿದ್ದೇವೆ ಅಂತ ಹೇಳಿದ್ದರು.