ಶಿವಮೊಗ್ಗ: ಕಾಂಗ್ರೆಸ್ (Congress) ನಿರ್ನಾಮ ಮಾಡುವ ಉದ್ದೇಶದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (K.S.Eshwarappa) ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ದೇಶದಲ್ಲಿ ಕಾಂಗ್ರೆಸ್ ಬೇಡ ಎಂದು ಜನ ತೀರ್ಮಾನ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿಗಳೆಲ್ಲರೂ ಕೂಡ ಒಟ್ಟಾಗಬೇಕು. ಕಾಂಗ್ರೆಸ್ ನಿರ್ನಾಮ ಮಾಡಬೇಕೆಂಬ ಉದ್ದೇಶದಿಂದ ಬಿಜೆಪಿ (BJP), ಜೆಡಿಎಸ್ (JDS) ಮೈತ್ರಿ ಮಾಡಿಕೊಂಡಿದ್ದೇವೆ ಎಂದರು. ಇದನ್ನೂ ಓದಿ: ಜೆಡಿಎಸ್ ಮೈತ್ರಿಯನ್ನು ನಾನು ಸ್ವಾಗತ ಮಾಡ್ತೀನಿ: ಮುನಿರತ್ನ
Advertisement
Advertisement
ಲೋಕಸಭಾ ಚುನಾವಣೆಯಲ್ಲಿ (Lok Sabha Election) ಒಟ್ಟಾಗಿ ಹೋಗುತ್ತೇವೆ. ಲೋಕಸಭಾ ಚುನಾವಣೆ ಅಂದರೆ ತಾಲೂಕು ಪಂಚಾಯ್ತಿ, ಗ್ರಾಮ ಪಂಚಾಯ್ತಿ ಚುನಾವಣೆಯಂತಲ್ಲ. ಲೋಕಸಭಾ ಚುನಾವಣೆ ಅಂದರೆ ದೇಶವನ್ನು ಉಳಿಸುವ ಚುನಾವಣೆಯಾಗಿದೆ. ಬಿಜೆಪಿ-ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸಿ, ಯಶಸ್ಸು ಗಳಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: Chandrababu Naidu Arrested – ಏನಿದು 371 ಕೋಟಿ ಹಗರಣ ಕೇಸ್?
Advertisement
ಈ ಹಿಂದೆ ಕಾಂಗ್ರೆಸ್ ವಿರೋಧಿ ಮತಗಳು ವಿಭಜನೆಯಾಗಿ ಕಾಂಗ್ರೆಸ್ ಲಾಭ ಗಳಿಸಿತ್ತು. ಜೊತೆಗೆ ಕಳೆದ ಚುನಾವಣೆ ವೇಳೆ ರಾಜ್ಯದಲ್ಲಿ ಒಂದು ಸ್ಥಾನ ಸಹ ಗೆದ್ದಿತ್ತು. ಈ ಬಾರಿ 1 ಸ್ಥಾನ ಕಾಂಗ್ರೆಸ್‍ಗೆ ಕೊಡಬಾರದು ಎಂದು ತೀರ್ಮಾನ ಮಾಡಿದ್ದೇವೆ. ರಾಜ್ಯದಲ್ಲಿ 28ಕ್ಕೆ 28 ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಬೆಳ್ಳಂಬೆಳಿಗ್ಗೆ ಮನೆಯ ಅಂಗಳಕ್ಕೆ ಎಂಟ್ರಿ ಕೊಟ್ಟ ಗಜ
Advertisement
ಒಂದು ಸೀಟನ್ನು ಕಾಂಗ್ರೆಸ್‍ಗೆ ಕೊಡಬಾರದು ಎಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ. ಈ ಹಿಂದೆ ಸಿಎಂ ಆಗಿದ್ದ ಸಿದ್ದರಾಮಯ್ಯ, ಬಿಜೆಪಿ ಎರಡು ಸೀಟು ಕೂಡ ಬರಲ್ಲ ಅಂತ ಹೇಳಿಕೆ ನೀಡಿದ್ದರು. ಕಾಂಗ್ರೆಸ್‍ಗೆ ಒಂದೇ ಸೀಟು ಬಂದಿತ್ತು. ಬಿಜೆಪಿ 25 ಸೀಟು ಗೆದ್ದಿತ್ತು. ಕಾಂಗ್ರೆಸ್ ವ್ಯಕ್ತಿಗತ ಯೋಚನೆ ಮಾಡುತ್ತೆ. ನಾವು ದೇಶಕ್ಕಾಗಿ ಯೋಚನೆ ಮಾಡ್ತೇವೆ. ಬಿಜೆಪಿಗೆ ಯಾವುದೇ ಭಯವಿಲ್ಲ. ಚುನಾವಣೆ ನಂತರ ಉತ್ತರ ಸಿಗುತ್ತದೆ ಎಂದರು. ಇದನ್ನೂ ಓದಿ: G20 ಒಕ್ಕೂಟಕ್ಕೆ ಆಫ್ರಿಕನ್ ಯೂನಿಯನ್ ಸೇರ್ಪಡೆ
ಪಕ್ಷದಿಂದ ಹೊರ ಹೋಗುವವರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸೀಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಕೆಲವರು ಪಕ್ಷ ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ ಒಂದು ಕೋಟಿ ಸದಸ್ಯರಿದ್ದಾರೆ. ಎಲ್ಲರೂ ನಿಷ್ಠಾವಂತ ಕಾರ್ಯಕರ್ತರೇ ಎಂದು ಹೇಳಿದರು. ಇದನ್ನೂ ಓದಿ: ಜಿ20 ಸಭೆಯಲ್ಲಿ ಮತ್ತೆ ‘ಭಾರತ್’ ನಾಮಸ್ಮರಣೆ – ಪ್ರಧಾನಿ ಆಸನದ ಮುಂದೆ ಭಾರತ್ ಪದ ಬಳಕೆ
ಕಾಂಗ್ರೆಸ್ ಈ ದೇಶವನ್ನು ನಾಶ ಮಾಡಿದೆ. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ 9 ವರ್ಷದಲ್ಲಿ ಅಭಿವೃದ್ಧಿ ಮಾಡಿರುವುದನ್ನು ಈ ದೇಶದ ಜನ ನೋಡಿದ್ದಾರೆ. ಇದಕ್ಕೆ ಮುಂಬರುವ ಚುನಾವಣೆ ನಂತರ ಉತ್ತರ ಸಿಗುತ್ತದೆ ಎಂದರು. ಇದನ್ನೂ ಓದಿ: ಜಾಗತಿಕ ಒಳಿತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯಬೇಕಾದ ಸಮಯ ಇದು: ಮೋದಿ
Web Stories