ಲಕ್ನೋ: ಲೋಕಸಭಾ ಚುನಾವಣೆಗೂ ಮುನ್ನ ಛಿದ್ರಗೊಂಡ I.N.D.I.A ಒಕ್ಕೂಟಕ್ಕೆ ಇದೀಗ ಉತ್ತರಪ್ರದೇಶದಲ್ಲಿ (Uttarapradesh) ಬೆಂಬಲ ಸಿಕ್ಕಿದೆ. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yadav) ಅವರು ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಖಚಿತಪಡಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಉಭಯ ಪಕ್ಷಗಳ ನಡುವಿನ ಹಗ್ಗಜಗ್ಗಾಟದ ಸುದ್ದಿಗಳು ನಿರಂತರವಾಗಿ ಮುನ್ನೆಲೆಗೆ ಬರುತಿತ್ತು. ಈ ನಡುವೆ ಇಂದು ಅಖಿಲೇಶ್ ಯಾದವ್ ಅವರು ಯುಪಿಯಲ್ಲಿ ಎಸ್‌ಪಿ ಮತ್ತು ಕಾಂಗ್ರೆಸ್ (Congress) ನಡುವೆ ಯಾವುದೇ ವಿವಾದವಿಲ್ಲ. ಈ ಎರಡೂ ಪಕ್ಷಗಳ ನಡುವೆ ಮೈತ್ರಿ ಇರುತ್ತದೆ ಎಂದು ತಿಳಿಸಿದರು.
Advertisement
Advertisement
ಮೂಲಗಳ ಪ್ರಕಾರ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರು ಅಖಿಲೇಶ್ ಯಾದವ್ ಅವರನ್ನು ಮೈತ್ರಿಗೆ ಮನವೊಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಖಿಲೇಶ್ ಮತ್ತು ಪ್ರಿಯಾಂಕಾ ನಡುವೆ ಡೀಲ್ ನಡೆದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಯೋಚನೆ ಮಾಡಿ ಹೇಳ್ತೀನಿ: ಡಾ.ಸಿ.ಎನ್.ಮಂಜುನಾಥ್
Advertisement
Advertisement
ಡೀಲ್ ಏನು..?: INDIA ಮೈತ್ರಿಯಲ್ಲಿ ಎಸ್‌ಪಿ ಮತ್ತು ಕಾಂಗ್ರೆಸ್ ನಡುವಿನ ಹದಗೆಟ್ಟ ಪರಿಸ್ಥಿತಿಯನ್ನು ನಿಭಾಯಿಸಿದ ಕೀರ್ತಿಯನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ನೀಡಲಾಗುತ್ತಿದೆ. ಪ್ರಿಯಾಂಕಾ ಗಾಂಧಿಯವರು ಅಖಿಲೇಶ್ ಯಾದವ್ ಅವರೊಂದಿಗೆ ಸೀಟು ಹಂಚಿಕೆ ವಿಚಾರವಾಗಿ ಫೋನ್ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಒಪ್ಪಂದ ನಡೆದಿದೆ ಎಂಬುದಾಗಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಯಾರು ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸುತ್ತಾರೆ?: ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ಎಸ್‌ಪಿ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಸೂತ್ರದ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಉತ್ತರಪ್ರದೇಶದಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಲಾಗಿದೆ ಎಂದು ಹೇಳಲು ನನಗೆ ಸಂತೋಷವಾಗಿದೆ. ಉಳಿದ 63 ಸ್ಥಾನಗಳಲ್ಲಿ INDIA ಒಕ್ಕೂಟವು ಎಸ್‌ಪಿ ಮತ್ತು ಇತರ ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.