– ದಲಿತರು ಅಂದ್ರೆ ಒಂದು ಕುಟುಂಬ ಅಲ್ಲ
– ಕಾಂಗ್ರೆಸ್ ಸರ್ಕಾರ ದಲಿತರ ಸಮಾಧಿ ಕಟ್ಟುತ್ತಿದೆ
ಬೆಂಗಳೂರು: ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದಿರುವ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆರೋಪಿಸಿದ್ದಾರೆ.
Advertisement
ಸಚಿವರಾಗಿ ಪ್ರಿಯಾಂಕ್ ಖರ್ಗೆ (Priyank Kharge) ಅವರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. ಜೊತೆಗೆ ಜಿಂದಾಲ್ ಕಂಪನಿಗೆ ಸಚಿವ ಸಂಪುಟದ ನಿರ್ಧಾರದಂತೆ ಜಮೀನು ಹಸ್ತಾಂತರ ಪ್ರಕ್ರಿಯೆ ಸ್ಥಗಿತಗೊಳಿಸಿ ತನಿಖೆ ಮಾಡಿಸಬೇಕು ಮತ್ತು ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಕೊಟ್ಟಿರುವ ರೀತಿಯಲ್ಲಿ ಬೇರೆ ಸಂಸ್ಥೆಗಳಿಗೂ ನೀಡಿರುವ ಎಲ್ಲಾ ಜಮೀನುಗಳ ತನಿಖೆ ಮಾಡಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.ಇದನ್ನೂ ಓದಿ: 3 ವರ್ಷಗಳಿಂದ ಸೆಕ್ಸ್ ಮಾಡಿಲ್ಲ- ಕಾರಣ ಬಿಚ್ಚಿಟ್ಟ ಉರ್ಫಿ ಜಾವೇದ್
Advertisement
Advertisement
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೆಐಎಡಿಬಿಯಿಂದ ಸಿಎ ನಿವೇಶನವನ್ನು ಖರ್ಗೆ ಕುಟುಂಬಕ್ಕೆ ಹಂಚಿಕೆ ಮಾಡಲಾಗಿದೆ. ಸಿಎ ಸೈಟ್‌ಗಳನ್ನು ಆಸ್ಪತ್ರೆ, ಪೋಸ್ಟ್ ಆಫೀಸ್ ಹೀಗೆ ಸಾರ್ವಜನಿಕ ಉದ್ದೇಶಕ್ಕೆಂದು ಮೊದಲೇ ನಿರ್ಧಾರ ಮಾಡಲಾಗಿದೆ. ವೈಯಕ್ತಿಕವಾಗಿ ಸೈಟ್ ಹಂಚಿಕೆ ಮಾಡಲು ಸಾಧ್ಯವಿಲ್ಲ. ಟ್ರಸ್ಟ್‌ಗೆ ಮಾತ್ರ ಕೊಡೋದು. ಇದು ಒಂದು ಮನೆಗೆ ಸೀಮಿತವಾಗಿ ಟ್ರಸ್ಟ್ ಇದೆ. ಗುಲ್ಬರ್ಗದಲ್ಲಿ ರಿಜಿಸ್ಟರ್ ಆಗಿದ್ದು, ಅದು ಪ್ರಿಯಾಂಕ್ ಖರ್ಗೆ, ರಾಧಾಕೃಷ್ಣ ಇವರ ಹೆಸರಲ್ಲಿದೆ ಎಂದರು.
Advertisement
ದಲಿತರು ಅಂದ್ರೆ ಒಂದೇ ಒಂದು ಕುಟುಂಬ ಅಲ್ಲ. ಅನೇಕ ಕುಟುಂಬಗಳಿವೆ. ಒಂದೇ ಕುಟುಂಬಕ್ಕೆ ಹಲವು ಎಕರೆ ಜಮೀನು ಕೊಟ್ಟಿದ್ದಾರೆ. ಅದು ಏರೋಸ್ಪೇಸ್ ಹೆಸರಲ್ಲಿ ತೆಗೆದುಕೊಂಡಿದ್ದಾರೆ. ಇತರೆ ಟ್ರಸ್ಟ್ಗೂ ಅರ್ಧ ಎಕರೆ ಸಿಕ್ಕಿದ್ರೂ ಅನುಕೂಲ ಆಗ್ತಿತ್ತು. ಇದು ನಂಬಿಕೆಯ ಪ್ರಶ್ನೆ. ಆ ಜಾಗ ಬೇಕು ಅಂತ ಅನೇಕರು ಅರ್ಜಿ ಹಾಕಿದ್ದಾರೆ. ಇದು ಮತ್ತೊಂದು ಮುಡಾ ಕೇಸ್ ಆಗಲಿದೆ. ಈ ಬಗ್ಗೆ ನಾನು ನಾಳೆ ಸಂಪೂರ್ಣ ದಾಖಲೆ ಇಟ್ಟು ಮಾತಾಡ್ತೀನಿ ಎಂದಿದ್ದಾರೆ.ಇದನ್ನೂ ಓದಿ: Exclusive | ಪರಪ್ಪನ ಅಗ್ರಹಾರ ಸೆಲ್ ಒಳಗಡೆ ಜಾಲಿ ಟ್ರಿಪ್‌ಗೆ ಹೋದಂತೆ ಕೈದಿಗಳ ಫೋಟೋ ಶೂಟ್!