ಟಾಲಿವುಡ್ ನಿರ್ದೇಶಕ ಸುಕುಮಾರ್- ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮತ್ತೊಮ್ಮೆ ಬಾಕ್ಸಾಫೀಸ್ ಬ್ಯಾಂಗ್ ಮಾಡೋದಿಕ್ಕೆ ಭರ್ಜರಿಯಾಗಿ ಸಜ್ಜಾಗ್ತಿದ್ದಾರೆ. ಪುಷ್ಪ ಮೂಲಕ ದಕ್ಷಿಣ ಧ್ರುವದಿಂದ ಉತ್ತರ ಧ್ರುವದವರೆಗೂ ಧಮಾಕ ಎಬ್ಬಿಸಿದ್ದ ಈ ಜೋಡಿ ಸೀಕ್ವೆಲ್ ಮೂಲಕ ಬೆಳ್ಳಿತೆರೆಯಲ್ಲಿ ಕಮಾಲ್ ಮಾಡಲು ಹೊರಟಿದೆ. ಪುಷ್ಪ 2 (Pushpa 2) ಸಣ್ಣ ಟೀಸರ್ ಹಂಗಾಮ ಕ್ರಿಯೇಟ್ ಮಾಡಿದೆ. ಕಾಣೆಯಾಗಿದ್ದ ಪುಷ್ಪ ಹೊಸ ಅವತಾರದಲ್ಲಿ ಪ್ರತ್ಯಕ್ಷನಾಗುವ ಮೂಲಕ ಇನ್ಮುಂದೆ ನನ್ನಂದೇ ರೂಲ್ ಎಂಬ ಸಂದೇಶ ರವಾನಿಸಿದ್ದಾನೆ. ಪುಷ್ಪ ಸೀಕ್ವೆಲ್ ಎಂಟ್ರಿ ಯಾವಾಗ ಎನ್ನುತ್ತಿದ್ದ ಫ್ಯಾನ್ಸ್‌ಗೆ ಚಿತ್ರತಂಡ ಸರ್ಪ್ರೈಸ್ ನೀಡಿದ್ದಾರೆ.

August 15th 2024!!!#Pushpa2TheRule pic.twitter.com/YHynsXLPB4
— Allu Arjun (@alluarjun) September 11, 2023
‘ಪುಷ್ಪ 2’ ದಿ ರೂಲ್ಸ್ ಶೂಟಿಂಗ್ ಭರದಿಂದ ಸಾಗ್ತಿದೆ. ಈ ನಡುವೆಯೇ ಸೀಕ್ವೆಲ್ ರೈಟ್ಸ್ ಭಾರೀ ಮೊತ್ತಕ್ಕೆ ಸೇಲ್ ಆಗಿರುವ ಖಬರ್ ಹೊರಬಿದ್ದಿದೆ. ಹಿಂದಿ ಬೆಲ್ಟ್ ನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಹಕ್ಕು ಮಾರಾಟವಾಗಿದೆಯಂತೆ. ಪುಷ್ಪ ಮೊದಲ ಭಾಗ ಬಾಲಿವುಡ್ ಅಂಗಳದಲ್ಲಿ ಬಡಾ ಹಿಟ್ ಕಂಡಿತ್ತು. ಅಲ್ಲು ಆಕ್ಟಿಂಗ್ , ಸುಕುಮಾರ್ ಟೇಕಿಂಗ್ ಗೆ ಹಿಂದಿ ಮಂದಿ ಫಿದಾ ಆಗಿದ್ದರು. ಇದನ್ನೂ ಓದಿ:ಕೆಲವೇ ದಿನಗಳಲ್ಲಿ ‘ಉತ್ತರಕಾಂಡ’ ಟೀಮ್ ಸೇರಿಕೊಳ್ಳಲಿದ್ದಾರೆ ನಟಿ ರಮ್ಯಾ
ಬಾಲಿವುಡ್ (Bollywood) ಚಿತ್ರಗಳಿಗೆ ಟಕ್ಕರ್ ಕೊಟ್ಟಿದ್ದ ಪುಷ್ಪ 2ಗಾಗಿ ಬಂಗಾರದ ಬೇಡಿಕೆ ಬಂದಿದೆ. 200 ಕೋಟಿ ಮೊತ್ತಕ್ಕೆ ಹಿಂದಿ ರೈಟ್ಸ್ ಮಾರಾಟವಾಗಿದ್ದು, 75 ಕೋಟಿಗೆ ಆಡಿಯೋ ರೈಟ್ಸ್ ಸೇಲ್ ಆಗಿರುವ ಬಗ್ಗೆ ಸಿನಿ ಜಜಾರ್ ನಲ್ಲಿ ಹೊಸ ಬಜ್ ಓಡಾಡ್ತಿದೆ. ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದಲ್ಲಿ ಅದ್ಧೂರಿಯಾಗಿ ತಯಾರಾಗ್ತಿರುವ ಪುಷ್ಪ-2 ಸಿನಿಮಾಗೆ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ.
ಪುಷ್ಪರಾಜ್‌ಗೆ ನಾಯಕಿ ರಶ್ಮಿಕಾ ಮಂದಣ್ಣ (Rashmika Mandanna) ಜೀವತುಂಬಿದ್ದಾರೆ. ಡಾಲಿ ಧನಂಜಯ್ (Daali Dhananjay), ಅನಸೂಯ ಭಾರದ್ವಾಜ್, ಫಹಾದ್ ಫಾಸಿಲ್ ಸೇರಿದಂತೆ ಹಲವು ನಟಿಸಿದ್ದಾರೆ.


