ಅಮರಾವತಿ: ನಟ ಅಲ್ಲು ಅರ್ಜುನ್ (Allu Arjun) ಬಂಧನ ಪ್ರಕರಣ ಈಗ ಬಿಸಿ ಬಿಸಿ ಚರ್ಚೆಯ ಸುದ್ದಿಯಾಗಿದೆ. ಆದ್ರೆ ನಟ ಪೊಲೀಸ್ ಪ್ರಕರಣ ಎದುರಿಸುತ್ತಿರುವುದು ಇದೇ ಮೊದಲಲ್ಲ. ಒಂದು ತಿಂಗಳ ಹಿಂದೆಯಷ್ಟೇ ತಮ್ಮ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಆಂಧ್ರಪ್ರದೇಶ ಹೈಕೋರ್ಟ್ (Andhra Pradesh HC) ವಜಾಗೊಳಿಸಿತ್ತು.
ಹೌದು. ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ನಂದ್ಯಾಲ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಇದರ ವಿರುದ್ಧ ಅಲ್ಲು ಅರ್ಜುನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಬಳಿಕ ಕೋರ್ಟ್ ಈ ಪ್ರಕರಣವನ್ನ ವಜಾಗೊಳಿಸಿತ್ತು.
Advertisement
Advertisement
ಏನದು ಪ್ರಕರಣ?
ಕಳೆದ ಮೇ ನಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ನಂದ್ಯಾಲ (Nandyal) ಕ್ಷೇತ್ರದ ವೈಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ ಶಿಲ್ಪಾ ರವಿ ಚಂದ್ರ ಕಿಶೋರ್ ರೆಡ್ಡಿ (Silpa Ravi Chandra Kishore Reddy) ಮನೆಗೆ ಅಲ್ಲು ಅರ್ಜುನ್ ಭೇಟಿ ನೀಡಿದ್ದರು. ಪ್ರಚಾರದ ಕೊನೆಯ ದಿನ ತನ್ನ ಸ್ನೇಹಿತನೂ ಆಗಿರುವ ಅಭ್ಯರ್ಥಿಗೆ ಬೆಂಬಲ ಸೂಚಿಸಲು ತೆರಳಿದ್ದರು. ಈ ವೇಳೆ ಅಲ್ಲು ಅರ್ಜುನ್ ಅವರ ಲಕ್ಷಾಂತರ ಅಭಿಮಾನಿಗಳು ಒಂದೇ ಕಡೆ ಜಮಾಯಿಸಿದ್ದರು. ಅಂದು ನಿಷೇಧಾಜ್ಞೆ ಸೆಕ್ಷನ್ 144 ಜಾರಿಯಲ್ಲಿದ್ದ ಕಾರಣ ಸರ್ಕಾರಿ ಆದೇಶ ಪಾಲನೆ ಮಾಡಿಲ್ಲ ಎಂದು ಅಧಿಕಾರಿಯೊಬ್ಬರು ಟು ಟೌನ್ ಪೊಲೀಸ್ ಠಾಣೆಯಲ್ಲಿ ನಟ ಮತ್ತು ವೈಎಸ್‌ಆರ್‌ಸಿಪಿ ಅಭ್ಯರ್ಥಿ ವಿರುದ್ಧ ದೂರು ದಾಖಲಿಸಿದ್ದರು.
Advertisement
ಅಲ್ಲದೇ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಭಾರತೀಯ ಚುನಾವಣಾ ಆಯೋಗ (ECI) ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ವಿಫಲವಾದ ಕಾರಣ ಅಂದಿನ ನಂದ್ಯಾಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಘುವೀರ್ ರೆಡ್ಡಿ ವಿರುದ್ಧ ಕ್ರಮಕ್ಕೆ ಆದೇಶಿಸಿತ್ತು. ಆಂಧ್ರಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ಎಸ್‌ಪಿ, ಇತರ ಸಿಬ್ಬಂದಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿತ್ತು.
Advertisement
ಈ ಬೆನ್ನಲ್ಲೇ ಅಲ್ಲು ಅರ್ಜುನ್ ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಕ್ಟೋಬರ್ 25 ರಂದು ಮಧ್ಯಂತರ ಆದೇಶ ಪ್ರಕಟಿಸಿದ ಕೋರ್ಟ್ ನವೆಂಬರ್ 6ಕ್ಕೆ ವಿಚಾರಣೆ ಮುಂದೂಡಿ, ಯಾವುದೇ ಕಾನೂನು ಕ್ರಮ ಕೈಗೊಳ್ಳದಂತೆ ಸೂಚಿಸಿತ್ತು. ನ.6ರಂದು ನಡೆದ ವಿಚಾರಣೆಯಲ್ಲಿ ವಾದ-ಪ್ರತಿವಾದ ಆಲಿಸಿದ ಬಳಿಕ ಕೋರ್ಟ್ ಪ್ರಕರಣವನ್ನು ವಜಾಗೊಳಿಸಿತ್ತು. ಒಂದು ತಿಂಗಳ ಹಿಂದೆಯಷ್ಟೇ ಒಂದು ಕೇಸ್‌ನಿಂದ ಬಿಗ್ ರಿಲೀಫ್ ಪಡೆದಿದ್ದ ಅಲ್ಲು ಅರ್ಜುನ್ ಇದೀಗ ಮತ್ತೊಂದು ಪ್ರಕರಣದಲ್ಲಿ ಬಂಧನವಾಗಿದ್ದಾರೆ.
ಅಲ್ಲು ಅರ್ಜುನ್ ಅರೆಸ್ಟ್:
ಪುಷ್ಪ 2′ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಅಲ್ಲು ಅರ್ಜುನ್‌ನನ್ನು ಬಂಧಿಸಿರುವ ಪೊಲೀಸರು ಮೆಡಿಕಲ್ ಟೆಸ್ಟ್‌ಗೆ ಉಸ್ಮಾನಿಯಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ನಾಂಪಲ್ಲಿ ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ.
ಏನಿದು ಕೇಸ್?
ಇದೇ ತಿಂಗಳ ಡಿಸೆಂಬರ್ 4 ರಂದು ನಡೆದ ʻಪುಷ್ಪ 2: ದಿ ರೂಲ್ʼನ ಪ್ರೀಮಿಯರ್ ಶೋ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ (39) ಎಂಬ ಮಹಿಳೆ ಸಾವನ್ನಪ್ಪಿದ್ದರು. ಅವರ 9 ವರ್ಷದ ಮಗ ಕಾಲ್ತುಳಿತಕ್ಕೆ ಸಿಕ್ಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಸಹ ಆರೋಪಿಯಾಗಿದ್ದರು. ಬಿಎನ್‌ಎಸ್ 105, 118, 105 ಅಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಇಂದು ಬಂಧಿಸಿದ್ದಾರೆ.
ಈ ಪ್ರಕರಣ ವಜಾಗೊಳಿಸುವಂತೆ ನಟ ಈಗಾಗಲೇ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ. ಈನಡುವೆ ಚಿಕ್ಕಡಪಲ್ಲಿ ಪೊಲೀಸರು ಏಕಾಏಕಿ ಬಂಧಿಸಿದ್ದಾರೆ. ಇದು ಪುಷ್ಪಾ-2 ಸಕ್ಸಸ್ ಸಂಭ್ರಮದಲ್ಲಿರುವ ಚಿತ್ರತಂಡಕ್ಕೆ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಶಾಕ್ ಕೊಟ್ಟಂತಾಗಿದೆ.
25 ಲಕ್ಷ ಪರಿಹಾರ ಘೋಷಿಸಿದ್ದ ನಟ:
ಇತ್ತೀಚೆಗೆ ನಟ ಅಲ್ಲು ಅರ್ಜುನ್ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ದುರಂತ ನೆನೆದು ಸಂತಾಪ ಸೂಚಿಸಿದ್ದರು. ಅಲ್ಲದೇ ಮೃಥ ರೇವತಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು.