ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ಅಲ್ಲು ಅರ್ಜುನ್ ಅವರಿಗೆ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ತುರ್ತು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ರೇವಂತ್ ರೆಡ್ಡಿ ಹೆಸರು ಹೇಳದ್ದಕ್ಕೆ ಬಂಧನ – ಸಿಎಂ ವಿರುದ್ಧ ಸಿಡಿದ ಅಲ್ಲು ಅಭಿಮಾನಿಗಳು
ಚಿಕ್ಕಡಪಲ್ಲಿ ಪೊಲೀಸರು ಇಂದು (ಡಿ.13) ಅಲ್ಲು ಅರ್ಜುನ್ ಅವರನ್ನು ಬಂಧಿಸಿ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು. ಕೋರ್ಟ್ ಆದೇಶದ ಬೆನ್ನಲ್ಲೇ ಅಲ್ಲು ಅರ್ಜುನ್ ಅವರನ್ನು ಚಂಚಲಗೂಡ ಜೈಲಿಗೆ ಶಿಫ್ಟ್ ಮಾಡುವ ಪ್ರಕ್ರಿಯೆ ಆರಂಭವಾಗಿತ್ತು.
ಡಿ. 4 ರಂದು ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒರ್ವ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು.
ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚಿಕ್ಕಡಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ.