ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರು ‘ಪುಷ್ಪ 2’ (Pushpa 2) ನಂತರ ‘ಜವಾನ್’ ಡೈರೆಕ್ಟರ್ ಅಟ್ಲಿ ಜೊತೆ ಹೊಸ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಚಿತ್ರಕ್ಕೆ ಸಮಂತಾ ನಾಯಕಿಯಾಗಿ ಎಂಟ್ರಿ ಕೊಡಲಿದ್ದಾರೆ. ಅಲ್ಲು ಅರ್ಜುನ್ ಜೊತೆ ಸೊಂಟ ಬಳುಕಿಸಿದ್ದ ನಟಿ ಮತ್ತೆ ಹೀರೋಯಿನ್ ಆಗಿ ಎಂಟ್ರಿ ಕೊಡ್ತಿದ್ದಾರೆ.
ಅಲ್ಲು ಅರ್ಜುನ್ (Allu arjun) ಮುಂದಿನ ಸಿನಿಮಾ ಬಿಗ್ ಬಜೆಟ್‌ನಲ್ಲಿ ಬರಲಿದೆ. ಅದ್ಧೂರಿಯಾಗಿ ಮೂಡಿ ಬರಲಿರುವ ಈ ಚಿತ್ರಕ್ಕೆ ಅಟ್ಲಿ ನಿರ್ದೇಶನ ಮಾಡಲಿದ್ದಾರೆ. ‘ಜವಾನ್’ ಡೈರೆಕ್ಟರ್ ಬರೆದಿರುವ ಕಥೆ ಕೇಳಿ, ಅಲ್ಲು ಅರ್ಜುನ್ ಥ್ರಿಲ್ ಆಗಿ ನಟಿಸಲು ಓಕೆ ಎಂದಿದ್ದಾರೆ.
ಅಲ್ಲು ಅರ್ಜುನ್ ಹೊಸ ಚಿತ್ರಕ್ಕೆ ‘AAA’ ಎಂದು ವರ್ಕಿಂಗ್ ಟೈಟಲ್ ಇಡಲಾಗಿದೆ. ಇಷ್ಟು ದಿನ ನಾಯಕಿಯ ಹುಡುಕಾಟದಲ್ಲಿದ್ದ ಚಿತ್ರತಂಡ ಇದೀಗ ಸಮಂತಾರನ್ನು ಸಂಪರ್ಕಿಸಿದೆ. ಕಥೆ ಕೇಳಿ ಸಮಂತಾ ಕೂಡ ಓಕೆ ಎಂದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:‘ಯುವ’ನ ಚೊಚ್ಚಲ ಚಿತ್ರವನ್ನು ಹಾಡಿ ಹೊಗಳಿದ ನಾಗಾರ್ಜುನ್
ಇನ್ನೂ ಅಲ್ಲು ಅರ್ಜುನ್ ಮತ್ತು ಸಮಂತಾ (Samantha) ಹಲವು ವರ್ಷಗಳಿಂದ ಸ್ನೇಹಿತರು. ಈ ಹಿಂದೆ ಹಲವು ಪ್ರಾಜೆಕ್ಟ್‌ಗಳಲ್ಲಿ ಜೊತೆಯಾಗಿ ನಟಿಸಿದ್ದಾರೆ. ಅದರಲ್ಲೂ `ಪುಷ್ಪ’ ಚಿತ್ರದ ಐಟಂ ಸಾಂಗ್‌ನಲ್ಲಿ ಇಬ್ಬರ ಕಾಂಬಿನೇಷನ್ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದರು. ಮತ್ತೆ ಈ ಜೋಡಿ ಒಟ್ಟಿಗೆ ನಟಿಸುತ್ತಾರೆ ಎಂದು ಸುದ್ದಿ ಕೇಳಿಯೇ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಹಾಗಾದ್ರೆ ಅಲ್ಲು ಅರ್ಜುನ್ ಮತ್ತು ಸಮಂತಾ ಒಟ್ಟಿಗೆ ನಟಿಸುತ್ತಾರಾ? ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಗುವವರೆಗೂ ಕಾಯಬೇಕಿದೆ. ಒಂದು ವೇಳೆ ಈ ಸುದ್ದಿ ಅಧಿಕೃತ ಆಗಿದ್ದಲ್ಲಿ ಫ್ಯಾನ್ಸ್‌ಗೆ ಹಬ್ಬದೂಟ ಗ್ಯಾರಂಟಿ.