– ನನ್ನ ಎಲ್ಲಾ ಫ್ಯಾನ್ಸ್‌ಗೆ ಧನ್ಯವಾದ; ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ
ಅಮರಾವತಿ: ‘ಪುಷ್ಪ 2’ (Pushpa 2) ಪ್ರೀಮಿಯರ್ ಶೋ ವೇಳೆ ಚಿತ್ರಮಂದಿರದ ಬಳಿ ಕಾಲ್ತುಳಿತಕ್ಕೆ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಒಂದೇ ದಿನಕ್ಕೆ ಜೈಲಿನಿಂದ ಹೊರಬಂದ ನಟ ಅಲ್ಲು ಅರ್ಜುನ್ (Allu Arjun) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
Advertisement
ನನ್ನ ಎಲ್ಲಾ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಚಿಂತಿಸುವ ಏನೂ ಇಲ್ಲ. ನಾನು ಮತ್ತೊಮ್ಮೆ ಮೃತರ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಇದು ದುರದೃಷ್ಟಕರ ಘಟನೆಯಾಗಿದೆ. ನಡೆದಿದ್ದಕ್ಕಾಗಿ ನಾವು ವಿಷಾದಿಸುತ್ತೇವೆ ಎಂದು ನಟ ಮಾತನಾಡಿದ್ದಾರೆ. ಇದನ್ನೂ ಓದಿ: ‘ಪುಷ್ಪ 2’ ನಟ ಅಲ್ಲು ಅರ್ಜುನ್ ಜೈಲಿಂದ ರಿಲೀಸ್ – ಜೈಲಲ್ಲಿ ಒಂದು ರಾತ್ರಿ ಕಳೆದ ಸ್ಟಾರ್
Advertisement
Advertisement
ನಾನು ಕಾನೂನು ಪಾಲಿಸುವ ನಾಗರಿಕನಾಗಿದ್ದು, ತನಿಖೆಗೆ ಎಲ್ಲ ರೀತಿಯಲ್ಲೂ ಸಹಕರಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಡಿಸೆಂಬರ್ 4 ರಂದು ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಚಂಚಲಗುಡ ಜೈಲಿನಲ್ಲಿ ಒಂದು ರಾತ್ರಿ ಕಳೆದರು. ನಿನ್ನೆ ತಡರಾತ್ರಿಯವರೆಗೂ ಜಾಮೀನು ಆದೇಶದ ಪ್ರತಿಯನ್ನು ಅಧಿಕಾರಿಗಳು ಸ್ವೀಕರಿಸದ ಕಾರಣ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದರೂ ಅವರನ್ನು ಬಿಡುಗಡೆ ಮಾಡಲಾಗಿರಲಿಲ್ಲ. ಇದನ್ನೂ ಓದಿ: ಶಾರುಖ್ ಕೇಸ್ ಪ್ರಸ್ತಾಪ – ಬಂಧನವಾಗಿದ್ದ ಪುಷ್ಪರಾಜನಿಗೆ ಕೆಲ ಗಂಟೆಯಲ್ಲಿ ಜಾಮೀನು ಸಿಕ್ಕಿದ್ದು ಹೇಗೆ?
ಅಲ್ಲು ಅರ್ಜುನ್ ಬಂಧನವಾದ ಕೆಲವೇ ಗಂಟೆಗಳಲ್ಲಿ ಸಂತ್ರಸ್ತೆಯ ಪತಿ ಪ್ರಕರಣವನ್ನು ಹಿಂಪಡೆಯಲು ಸಿದ್ಧ ಎಂದು ಹೇಳಿದ್ದರು. ‘ನಾನು ಪ್ರಕರಣವನ್ನು ಹಿಂಪಡೆಯಲು ಸಿದ್ಧನಿದ್ದೇನೆ. ನನಗೆ ಬಂಧನದ ಬಗ್ಗೆ ತಿಳಿದಿರಲಿಲ್ಲ. ಅಲ್ಲು ಅರ್ಜುನ್ ಅವರಿಗೂ ನನ್ನ ಹೆಂಡತಿ ಸಾವನ್ನಪ್ಪಿರುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದರು.
ಡಿ.4 ರಂದು ಏನಾಗಿತ್ತು?
ಬ್ಲಾಕ್‌ಬಸ್ಟರ್ ‘ಪುಷ್ಪಾ 2: ದಿ ರೂಲ್’ ನ ಪ್ರಥಮ ಪ್ರದರ್ಶನದಲ್ಲಿ ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಥಿಯೇಟರ್ ಮುಂದೆ ನೆರೆದಿದ್ದರು. ಈ ವೇಳೆ ನೂಕುನುಗ್ಗಲಿನಿಂದಾದ ಕಾಲ್ತುಳಿತಕ್ಕೆ 35 ವರ್ಷದ ಮಹಿಳೆ ಸಾವನ್ನಪ್ಪಿದ್ದರು. ಅವರ ಎಂಟು ವರ್ಷದ ಮಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಇಂದೇ ಜೈಲು, ಇಂದೇ ಜಾಮೀನು – ಅಲ್ಲು ಅರ್ಜುನ್‌ಗೆ ಬಿಗ್ ರಿಲೀಫ್
ಘಟನೆಯ ನಂತರ, ಮಹಿಳೆಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ನಗರ ಪೊಲೀಸರು ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಥಿಯೇಟರ್ ಆಡಳಿತದ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ವಿಭಾಗಗಳ ಅಡಿಯಲ್ಲಿ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ರೇವಂತ್ ರೆಡ್ಡಿ ಹೆಸರು ಹೇಳದ್ದಕ್ಕೆ ಬಂಧನ – ಸಿಎಂ ವಿರುದ್ಧ ಸಿಡಿದ ಅಲ್ಲು ಅಭಿಮಾನಿಗಳು