ವಿಜಯಪುರ: ಮಹಾರಾಷ್ಟ್ರದ (Maharashtra) ಪಶ್ಚಿಮ ಘಟ್ಟದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು ತುಂಬಿದ್ದು, ಆಲಮಟ್ಟಿ ಜಲಾಶಯ (Almatti Dam) ಸಂಪೂರ್ಣ ಭರ್ತಿಯಾಗಿದೆ.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಲಾಲ್‌ಬಹದ್ದೂರ್ ಶಾಸ್ತ್ರೀ ಜಲಾಶಯ ಒಟ್ಟು 519.60 ಮೀಟರ್ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, ಸದ್ಯ 519.46 ಮೀ. ನೀರು ಭರ್ತಿಯಾಗಿದೆ. ಕಂಗಾಲಾಗಿದ್ದ ರೈತರ ಮೊಗದಲ್ಲಿ ಇದೀಗ ಮಂದಹಾಸ ಮೂಡಿದೆ. ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ – ಓರ್ವ ಸಾವು, ನರಳಾಡಿದ ಕಾರ್ಮಿಕರು

ವಿಜಯಪುರ ಜಿಲ್ಲೆಯಲ್ಲಿ ವರುಣ ಮುನಿಸಿಕೊಂಡಿದ್ದು, ಬರಗಾಲ ಆವಾರಿಸಿದೆ. ಇಂತಹ ಸಮಯದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿತ್ತು. ಜೊತೆಗೆ ಜೂನ್ ತಿಂಗಳಲ್ಲಿ ಜಲಾಶಯದಲ್ಲಿ ಕೇವಲ 2 ಟಿಎಂಸಿ ಮಾತ್ರ ನೀರು ಉಳಿದಿತ್ತು. ಇದೇ ಸಮಯದಲ್ಲಿ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಉತ್ತಮ ಮಳೆಯಾದ ಕಾರಣ ಅಪಾರ ಪ್ರಮಾಣದ ನೀರು ಜಾಲಶಯಕ್ಕೆ ಹರಿದು ಬಂದಿದೆ. ಇದರಿಂದ ಆಲಮಟ್ಟಿ ಜಲಾಶಯ ಇದೀಗ ಸಂಪೂರ್ಣ ಭರ್ತಿಯಾಗಿದೆ.

