ಲಂಡನ್: ಬ್ರಿಟನ್ ಪ್ರಧಾನಿ ಅಭ್ಯರ್ಥಿ ರೇಸ್‍ನಲ್ಲಿರುವ ರಿಷಿ ಸುನಾಕ್‍ಗೆ ದಿನಕಳೆದಂತೆ ಬೆಂಬಲ ಹೆಚ್ಚಾಗುತ್ತಿದೆ. ಆಡಳಿತಾರೂಢ ಕನ್ಸರ್ವೇಟಿವ್ ಪಾರ್ಟಿಯ ಬಹುತೇಕ ನಾಯಕರು ರಿಶಿ ಸುನಕ್ ಪ್ರಧಾನಿ ಆಗಲಿ ಎಂದು ಬಯಸುತ್ತಿದ್ದಾರೆ.
ರಿಷಿ ಸುನಾಕ್ ಚುನಾಯಿತರಾದರೆ ಅವರು ದೇಶಕ್ಕೆ ಒಳ್ಳೆಯ ಪ್ರಧಾನಿ ಆಗಿರಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ನಿನ್ನೆ ಪ್ರಕಟವಾದ ಒಪಿನಿಯನ್ ಪೋಲ್‍ನಲ್ಲಿ ಈ ವಿಚಾರ ಬಯಲಾಗಿದೆ.
Advertisement
Advertisement
ಪೆನ್ನಿ ಮೊರ್ಡಾಂಟ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಸದ್ಯ ಕನ್ಸರ್ವೇಟಿವ್ ಪಕ್ಷದ ನಾಯಕ ಹುದ್ದೆಗೆ ಚುನಾವಣೆ ನಡೆಯುತ್ತಿದೆ. ಇದರಲ್ಲಿ ಗೆದ್ದವರು ಪ್ರಧಾನಿ ಹುದ್ದೆಗೆ ಏರಲಿದ್ದಾರೆ. ಇದನ್ನೂ ಓದಿ: ಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಜು.19 ರಂದು ಸರ್ವಪಕ್ಷಗಳ ಸಭೆ – ಪ್ರಹ್ಲಾದ್ ಜೋಶಿ
Advertisement
ಬೋರಿಸ್ ಜಾನ್ಸನ್ ವಿರೋಧ:
ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವ ಬೋರಿಸ್ ಜಾನ್ಸನ್ ಅವರು ರಿಷಿ ಸುನಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಯಾರನ್ನು ಬೇಕಾದರೂ ಬೆಂಬಲಿಸಿ ಆದರೆ ರಿಷಿ ಸುನಕ್ ನ್ನು ಬೇಡ ಎಂದು ಜಾನ್ಸನ್ ತಮ್ಮ ಬೆಂಬಲಿಗರಿಗೆ ಹೇಳಿದ್ದಾರೆ.
Advertisement
ಜಾನ್ಸನ್ ಅವರಿಗೆ ತಮ್ಮ ಪಕ್ಷದ ಸದಸ್ಯರಿಂದಲೇ ಬೆಂಬಲ ಕಳೆದುಕೊಳ್ಳುವುದಕ್ಕೆ ಕಾರಣ ಎಂದು ರಿಷಿ ಕಾರಣ ಜಾನ್ಸನ್ ದೂಷಿಸಿದ್ದಾರೆ.