ಬೆಂಗಳೂರು: ಪಿಎಫ್‍ಐ ನಿಷೇಧ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ (Alok Kumar) ಅವರು, ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಮ್ ಎಂದು ಟ್ವೀಟ್ ಮಾಡಿದ್ದಾರೆ.
ದೇಶ ವಿರೋಧಿ, ಕಾನೂನು ಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‍ಮೆಂಟ್ ಆಫ್ ಇಂಡಿಯಾ (ಸಿಮಿ) ನಿಷೇಧವಾಗಿ ಸರಿಯಾಗಿ 11 ವರ್ಷಗಳ ಬಳಿಕ ಪಿಎಫ್‍ಐ ನಿಷೇಧವಾಗಿದೆ. ಈ ಬಗ್ಗೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
Advertisement
Advertisement
ಟ್ವೀಟ್‍ನಲ್ಲಿ ಏನಿದೆ?: ಸಿಮಿ (SIMI) ಬ್ಯಾನ್ ಆಗಿದ್ದು 2001 ಸೆ. 26. ಪಿಎಫ್‍ಐ (PFI) ಬ್ಯಾನ್ ಆಗಿದ್ದು 2022 ಸೆ. 28. ಇದು ಸೆಪ್ಟಂಬರ್ ರೆವಲ್ಯೂಷನ್ ಆಗಿದೆ. ಸಾಮಾನ್ಯ ಜನರ ಹಿತಾಸಕ್ತಿಗಳನ್ನು ಕಾಪಾಡಲು ಬದ್ಧ ಹಾಗೂ ಕಾನೂನು ಬಾಹೀರ ಚಟುವಟಿಕೆಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮದ ಭರವಸೆ ಮೂಡಿದೆ. ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಮ್ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.
Advertisement
“September Revolution”
# SIMI banned on 26.09.01#PFI banned on 28.09.22
Assure the citizens that we are committed to protect the interests of common citizen ,
we are only against unlawful activities
“Paritranaaya saadhunaama, vinaashaaya cha dushkritaama”
— alok kumar (@alokkumar6994) September 28, 2022
Advertisement
ಕರ್ನಾಟಕದಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಹಲವು ಜಿಲ್ಲೆಗಳಲ್ಲಿ ಪಿಎಫ್‍ಐ, ಎಸ್‍ಡಿಪಿಐ ನಾಯಕರ ಮನೆ ಮೇಲೆ ದಾಳಿ ನಡೆಸಲಾಗಿತ್ತು. ಇದನ್ನೂ ಓದಿ: ಪಿಎಫ್‌ಐ ನಂತೆಯೇ RSSನ್ನೂ ಬ್ಯಾನ್ ಮಾಡಿ: ಕೇರಳ ವಿಪಕ್ಷಗಳ ಒತ್ತಾಯ
ಈ ಹಿಂದೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ಸಿಮಿ ಸಂಘಟನೆಗೆ ನಿಷೇಧ ಹೇರಲಾಗಿತ್ತು. ಇದಾದ ನಂತರ ಮತ್ತೊಂದು ಮುಖವಾಡವೇ ಪಿಎಫ್‍ಐ ಎಂಬುದು ಹಲವರ ಆರೋಪವಾಗಿತ್ತು. ಸರಿಸುಮಾರು ಒಂದು ದಶಕದಿಂದ ಈ ಸಂಘಟನೆಗಳನ್ನು ನಿಷೇಧ ಮಾಡಬೇಕೆಂದು ಅನೇಕ ರಾಜ್ಯ ಸರ್ಕಾರಗಳು ಕೇಂದ್ರದ ಮೇಲೆ ಒತ್ತಡ ಹಾಕಿದ್ದವು.
ಸೂಕ್ತ ದಾಖಲೆಗಳಿಗೆ ಕಾಯುತ್ತಿದ್ದ ಕೇಂದ್ರ ಗೃಹ ಇಲಾಖೆ ಕಳೆದ ಒಂದು ತಿಂಗಳಿನಿಂದ ದೇಶಾದ್ಯಂತ ಭಾರೀ ಕಾರ್ಯಾಚರಣೆ ನಡೆಸಿ ಅದರ ಮುಖಂಡರು, ಪದಾಧಿಕಾರಿಗಳನ್ನು ಬಂಧಿಸಿ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ದಾಳಿ ನಡೆದ ಬಳಿಕ ಪಾಪ್ಯುಲರ್ ಆಫ್ ಇಂಡಿಯಾ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದೆ. ಇದನ್ನೂ ಓದಿ: ಉಗ್ರ ಸಂಘಟನೆಗಳ ಜೊತೆ ಲಿಂಕ್ – ಈ ಕ್ಷಣದಿಂದಲೇ PFI, 8 ಅಂಗ ಸಂಸ್ಥೆಗಳು ಬ್ಯಾನ್