ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ (ಐಪಿಎಲ್) ಮುಂಬೈ ಇಂಡಿಯನ್ಸ್ ಅನ್ನು ಪ್ರತಿನಿಧಿಸಲು ನಾನು ಯಾವಾಗಲೂ ಬಯಸುತ್ತೇನೆ. ಅಂತಿಮವಾಗಿ ಮುಂಬೈ ತಂಡದ ಪರ ಆಡಲು ಅವಕಾಶ ಸಿಕ್ಕಿದ್ದಕ್ಕೆ ನನಗೆ ಸಂತೋಷವಾಗಿದೆ ಎಂದು ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನ 2ನೇ ದಿನದಂದು ಆರ್ಚರ್ ಅವರನ್ನು ಮುಂಬೈ ಇಂಡಿಯನ್ಸ್ 8 ಕೋಟಿ ರೂ.ಗೆ ಖರೀದಿಸಿದೆ. ಆರ್ಚರ್ ಐಪಿಎಲ್ 2022 ಸೀಸನ್‍ಗೆ ಲಭ್ಯವಿರುವುದಿಲ್ಲ. ಆದರೆ ಅವರು ಮುಂದಿನ 2023ರ ಐಪಿಎಲ್ ಆವೃತ್ತಿಯಲ್ಲಿ ಮುಂಬೈ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇದನ್ನೂ ಓದಿ: RCB ತಂಡದಲ್ಲಿ ಇಬ್ಬರು ಕನ್ನಡಿಗರು – ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
Advertisement
Advertisement
ಮುಂಬೈ ಇಂಡಿಯನ್ಸ್ ತಂಡವನ್ನು ಸೇರಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಮುಂಬೈ ತಂಡವು ಯಾವಾಗಲೂ ನನ್ನ ಹೃದಯಕ್ಕೆ ಹತ್ತಿರವಾಗಿರುವ ಫ್ರಾಂಚೈಸಿ ಆಗಿದೆ. ನಾನು ಯಾವಾಗಲೂ ಮುಂಬೈ ತಂಡಕ್ಕಾಗಿ ಆಡಲು ಬಯಸುತ್ತೇನೆ. ಅಂತಿಮವಾಗಿ ಫ್ರಾಂಚೈಸಿಗಾಗಿ ಆಡಲು ಮತ್ತು ಕ್ರಿಕೆಟ್‍ನ ದೊಡ್ಡ ತಾರೆಗಳೊಂದಿಗೆ ಡ್ರೆಸ್ಸಿಂಗ್ ಕೋಣೆಯನ್ನು ಹಂಚಿಕೊಳ್ಳಲು ನನಗೆ ಅವಕಾಶ ಸಿಕ್ಕಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಮುಂಬೈ ತಂಡದೊಂದಿಗಿನ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ನಿಜವಾಗಿಯೂ ನಾನು ಎದುರು ನೋಡುತ್ತಿದ್ದೇನೆ ಎಂದು ಮುಂಬೈ ಇಂಡಿಯನ್ಸ್‌ನ ಯುಟ್ಯೂಬ್ ಚಾನೆಲ್‍ನಲ್ಲಿ ಪೋಸ್ಟ್ ಮಾಡಿದ ವೀಡಿಯೋದಲ್ಲಿ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಐಪಿಎಲ್ ಹರಾಜು ಅಂತ್ಯ – ಫ್ರಾಂಚೈಸ್‍ಗಳಿಗೆ ಬೇಡವಾದ ಸ್ಟಾರ್ ಆಟಗಾರರು
Advertisement
Advertisement
ಜೋಫ್ರಾ ಆರ್ಚರ್ ಮತ್ತು ಜಸ್ಪ್ರೀತ್ ಬುಮ್ರಾ ಅವರು ಮುಂಬೈ ತಂಡದಲ್ಲಿ ಒಟ್ಟಿಗೆ ಬೌಲಿಂಗ್ ಮಾಡುವುದನ್ನು ನೋಡಲು ಬಯಸುತ್ತಿದೆ ಎಂದು ಮುಂಬೈ ಇಂಡಿಯನ್ಸ್ ಕ್ರಿಕೆಟ್ ಕಾರ್ಯಾಚರಣೆಯ ನಿರ್ದೇಶಕ ಜಹೀರ್ ಖಾನ್ ಹೇಳಿದ್ದಾರೆ.
ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಸಿಂಗಾಪುರದ ಟಿಮ್ ಡೇವಿಡ್ ಅವರಿಗೆ 8.25 ಕೋಟಿ ರೂ. ಇಶಾನ್ ಕಿಶನ್ ಅವರಿಗೆ 15.25 ಕೋಟಿ ರೂ. ಮತ್ತು ಅರ್ಜುನ್ ತೆಂಡೂಲ್ಕರ್ ಅವರಿಗೆ 30 ಲಕ್ಷ ರೂ. ನೀಡಿ ಅವರನ್ನು ಖರೀದಿಸಿದೆ.