ಹಾವೇರಿ: ಸಿಎಂ ಆಗಲಿಕ್ಕೆ ಆಸೆ ಇದೆ, ಅಧ್ಯಕ್ಷ ಆಗಲಿಕ್ಕೆ ಆಸೆ ಇದೆ, ಮಂತ್ರಿ ಆಗಲಿಕ್ಕೂ ಆಸೆ ಇದೆ, ಆದ್ರೆ ಅಂತಿಮವಾಗಿ ಪಕ್ಷ ತೀರ್ಮಾನ ಮಾಡಲಿ. ಅದು ಪಕ್ಷದ ತೀರ್ಮಾನವೇ ಅಂತಿಮವಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ.
ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಮಾತನಾಡಿದ ಅವರು, ಈ ಹಿಂದೆ ಸಿಎಂ ಆಗ್ತಾರೆ ಅಂತ ಹೇಳಿ ಹೆಸರು ಓಡಾಡ್ತು. ಈಗ ಅಧ್ಯಕ್ಷ ಆಗ್ತಾರೆ ಅಂತಾ ಹೆಸರು ಓಡಾಡ್ತಾ ಇದೆ. ನಮ್ಮ ಉತ್ಸಾಹ ಅಷ್ಟೆ. ಅಂತಿಮವಾಗಿ ಪಕ್ಷ ತೀರ್ಮಾನ ಮಾಡಬೇಕು. ನಾವೆಲ್ಲಾ ಕಾದು ನೋಡಬೇಕು ಅಷ್ಟೆ. ಈ ವಿಚಾರವಾಗಿ ನಾನು ಯಾವುದೇ ರೀತಿ ಒತ್ತಡ ಹಾಕಿಲ್ಲ. ಚುನಾವಣೆಯಲ್ಲಿ ಗೆಲ್ಲಿಸಿದ್ದೀವಿ, ತೃಪ್ತಿ ಇದೆ. ಮಂತ್ರಿಯಾಗಿ ಕೆಲಸ ಮಾಡ್ತಾ ಇದ್ದೀವಿ, ತೃಪ್ತಿ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಳ್ಳೆಯ ರಾಜಕಾರಣದ ಬಗ್ಗೆ ಮಾನ ಮರ್ಯಾದೆ ಇರುವವರ ಬಳಿ ಪ್ರಶ್ನೆ ಕೇಳಿ – ಯತ್ನಾಳ್ ಟಾಂಗ್
ಅಧ್ಯಕ್ಷ ಹುದ್ದೆ ಅಹಿಂದ ನಾಯಕರಿಗೆ ಕೊಡಬೇಕು ಅಂತಾ ಒತ್ತಾಯ ಇದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆದರೆ ಅಂತಿಮವಾಗಿ ವರಿಷ್ಠರು ತೀರ್ಮಾನ ಮಾಡಬೇಕು. ಯಾರಿಗೆ ಕೊಡಬೇಕು? ಯಾಕೆ ಕೊಡಬೇಕು? ಅದರಿಂದ ಆಗುವ ಲಾಭ ಏನು ಎಂಬ ಬಗ್ಗೆ ಇದೆಲ್ಲಾ ಚರ್ಚೆ ಮಾಡಿ ಅಂತಿಮವಾಗಿ ತೀರ್ಮಾನ ಮಾಡುತ್ತಾರೆ. ಈ ಬಾರಿ ಆ ರೀತಿ ಆಗಿಲ್ಲ. ಈ ಬಾರಿ ಪೋರ್ಟ್‌ಪೋಲಿಯೋದಲ್ಲಿ ನಾವೇ ಇದ್ದೇವೆ. ಉತ್ತರ ಕರ್ನಾಟಕ ಹಾಗೂ ಹೈದ್ರಾಬಾದ್ ಕರ್ನಾಟಕಕ್ಕೆ ಒಳ್ಳೆ ಖಾತೆಗಳನ್ನೇ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸಮಾವೇಶ ಡಿಸೆಂಬರ್ 5 ಅಥವಾ 8 ಎಂಬುದು ಖಚಿತ ಆಗಿಲ್ಲ. ಹೇಳ್ತಾ ಇದಾರೆ. ಎಲ್ಲಿದೆ ಪತ್ರ? ಯಾರಿಗೆ ಬರೆದರು? ಯಾಕೆ ಬರೆದರು? ಏನು ಆ್ಯಕ್ಷನ್ ತಗೊಂಡ್ರು? ಬೇಕಲ್ಲಾ? ಸುಮ್ಮನೇ ಏನೋ ಒಂದು ವಾಟ್ಸಾಪ್‌ನಲ್ಲಿ ಬಂದರೆ ಇಡೀ ಪಕ್ಷದ ನಿರ್ಧಾರ ಆಗಲ್ಲ. ಸಮಾವೇಶದ ಬಗ್ಗೆ ಅಧ್ಯಕ್ಷರು ಇದಾರೆ, ಸಿಎಂ ಇದಾರೆ ಅವರು ತೀರ್ಮಾನ ಮಾಡ್ತಾರೆ. ಬಣ ಬಡಿದಾಟ ಇದೆ ಅಂತಾ ನಾನು ಹೇಳ್ತಾ ಇರೋದು 10ನೇ ಸಲ. ನಮ್ಮ ಪಕ್ಷದಲ್ಲೂ ಇದೆ, ಬೇರೆ ಪಕ್ಷದಲ್ಲೂ ಬಣ ಬಡಿದಾಟ ಇದೆ. ಬಡಿದಾಟ ಇರೋದೇ ಇದು. ಆದರೆ ಚುನಾವಣೆ ಬಂದಾಗ ಒಂದಾಗ್ತೀವಿ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯಿಂದ ಯತ್ನಾಳ್ ಉಚ್ಚಾಟನೆ ಮಾಡಬೇಕು: ರೇಣುಕಾಚಾರ್ಯ ಆಗ್ರಹ