ಹೈದರಾಬಾದ್: ಆರ್‌ಸಿ 15 ಚಿತ್ರೀಕರಣಕ್ಕಾಗಿ ತೆಲುಗಿನ ಖ್ಯಾತ ನಟ ರಾಮ್ ಚರಣ್ ಅವರು ಆಂಧ್ರಪ್ರದೇಶದ ರಾಜಮಂಡ್ರಿಯ ರಾಜಾಜಿನಗರಕ್ಕೆ ಬಂದಿಳಿದ ತಕ್ಷಣ ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ ಹೊರಗೆ ಜಮಾಯಿಸಿ ಚರಣ್ ಅವರನ್ನು ಕಾಣಲು ಮುಗಿಬಿದ್ದಿದ್ದಾರೆ.
ರಾಮ್ ಚರಣ್ ತಮ್ಮ ಮುಂಬರುವ ಚಿತ್ರ ಆರ್‍ಆರ್‍ಆರ್ ಬಿಡುಗಡೆಗಾಗಿ ಈಗಾಗಲೇ ಕಾತುರದಿಂದ ಕಾಯುತ್ತಿದ್ದಾರೆ. ಎಸ್ ಎಸ್ ರಾಜಮೌಳಿ ನಿರ್ದೇಶನದ ಈ ಚಿತ್ರವು ಮಾರ್ಚ್ 25 ರಂದು ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ತೆಲುಗು ಅಲ್ಲದೆ, ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲೂ ಸಹ ಚಿತ್ರವು ಬಿಡುಗಡೆಯಾಗಲಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಗುಡ್‍ಬೈ ಹೇಳಿದ ಬಾಲಿವುಡ್ ನಟಿ ರಾಖಿ ಸಾವಂತ್
Advertisement
View this post on Instagram
Advertisement
ಫೆಬ್ರವರಿ 13 ರಂದು, ರಾಮ್ ಚರಣ್ ಮತ್ತು ಅವರ ತಂಡವು ಆರ್‌ಸಿ 15 ರ ಶೂಟಿಂಗ್‍ಗಾಗಿ ರಾಜಮಂಡ್ರಿ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದನ್ನೂ ಗಮನಿಸಿದ ಅಭಿಮಾನಿಗಳು ಚರಣ್ ಅವರ ದರ್ಶನ ಪಡೆಯಲು ವಿಮಾನ ನಿಲ್ದಾಣದ ಹೊರಗೆ ಕಾಯುತ್ತಿದ್ದರು.
Advertisement
ವಿಮಾನ ನಿಲ್ದಾಣದಿಂದ ಅವರು ರಾಜಮಂಡ್ರಿಯ ಪ್ರತಿಷ್ಠಿತ ಹೋಟೆಲ್‍ವೊಂದಕ್ಕೆ ತೆರಳುತ್ತಿದ್ದಾಗ ಅಭಿಮಾನಿಗಳು ರಸ್ತೆಯ ಎರಡೂ ಬದಿಯಲ್ಲಿ ಸಾಲುಗಟ್ಟಿ ನಿಂತು ಚರಣ್‍ಗೆ ಆತ್ಮೀಯ ಸ್ವಾಗತ ಕೋರಿದ್ದಾರೆ. ಈ ಸಂದರ್ಭದಲ್ಲಿ ರಾಮ್ ಚರಣ್ ಬೌನ್ಸರ್‌ಗಳು ಅಭಿಮಾನಿಗಳನ್ನು ಚದುರಿಸಲು ಹರ ಸಾಹಸ ಪಟ್ಟಿದ್ದಾರೆ. ಇದನ್ನೂ ಓದಿ: ಹಿರಿಯ ನಟ ರಾಜೇಶ್ ಸ್ಥಿತಿ ಗಂಭೀರ
Advertisement
Sheer #RamCharan craze in Rajahmundry airport ????????
— Haricharan Pudipeddi (@pudiharicharan) February 14, 2022
ಆರ್‌ಸಿ 15 ರಾಜಕೀಯಕ್ಕೆ ಸಂಬಂಧಪಟ್ಟ ಚಿತ್ರವಾಗಿದೆ. ಈ ಚಿತ್ರವನ್ನು ಶಂಕರ್ ಅವರು ನಿರ್ದೇಶಿಸಿದ್ದು, ಚಿತ್ರಕ್ಕೆ ಕಾರ್ತಿಕ್ ಸುಬ್ಬರಾಜ್ ಕಥೆ ಬರೆದಿದ್ದಾರೆ.
ಇತ್ತೀಚಿನ ಸಂದರ್ಶನವೊಂದರಲ್ಲಿ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರು ಚಿತ್ರವನ್ನು ಉದ್ದೇಶಿಸಿ ಮಾತನಾಡಿದ್ದು, ನಾನು ಈ ರಾಜಕೀಯ ಕಥೆಯನ್ನು ಹಲವು ವರ್ಷಗಳ ಹಿಂದೆ ಬರೆದಿದ್ದೇನೆ. ನನಗೆ ಬಹಳ ಹಿಂದೆಯೇ ಶಂಕರ್ ಸರ್ ಈ ಚಿತ್ರವನ್ನು ನಿರ್ದೇಶಿಸಿದರೆ ಉತ್ತಮವಾಗಿರುತ್ತದೆ ಅಂತ ಅನಿಸಿತ್ತು. ಹೀಗಾಗಿ ನಾನು ಈ ಕಥೆಯನ್ನು ಅವರಿಗೆ ನೀಡಿದಾಗ ಅವರು ಅದನ್ನು ಇಷ್ಟಪಟ್ಟರು. ಅವರು ಈಗಾಗಲೇ ಈ ಕಥೆಯನ್ನು ನಿರ್ದೇಶಿಸಲು ಒಪ್ಪಿಕೊಂಡಿದ್ದಾರೆ. ನಾನು ಅವರೊಂದಿಗೆ ಈ ಚಿತ್ರದಲ್ಲಿ ಕೆಲಸ ಮಾಡಲು ಅತ್ಯಂತ ಸಂತೋಷ ಮತ್ತು ಹೆಮ್ಮೆಯೆನಿಸುತ್ತದೆ.
ರಾಮ್ ಚರಣ್ ಹೊರತಾಗಿ, ಆರ್‌ಸಿ 15 ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ಅಂಜಲಿ, ಜಯರಾಮ್, ಸುನಿಲ್, ಶ್ರೀಕಾಂತ್ ಮತ್ತು ನವೀನ್ ಚಂದ್ರ ನಟಿಸಿದ್ದಾರೆ. ಛಾಯಾಗ್ರಾಹಕ ತಿರುರು, ಸಂಕಲನಕಾರ ಶಮೀರ್ ಮುಹಮ್ಮದ್ ಮತ್ತು ಸಂಗೀತ ಸಂಯೋಜಕ ಎಸ್ ಥಮನ್ ತಾಂತ್ರಿಕ ತಂಡದ ಭಾಗವಾಗಿದ್ದಾರೆ.