ಬೆಂಗಳೂರು: ನಾನು ಮಂಡ್ಯ (Mandya) ಕ್ಷೇತ್ರದ ಆಕಾಂಕ್ಷಿ ಅಲ್ಲ. ನಾನು ಇದನ್ನು ಹಿಂದೆಯೂ ಹೇಳಿದ್ದೆ. ನಾನು ಯೂ ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದು ಮಂಡ್ಯ ಸ್ಪರ್ಧೆ ವಿಚಾರವನ್ನು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನಿರಾಕರಿಸಿದ್ದಾರೆ.
ಜೆಡಿಎಸ್ (JDS) ಪಕ್ಷದ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಅವರು, ಈಗ ನಾನು ಮಂಡ್ಯ ಆಕಾಂಕ್ಷಿ ಅಲ್ಲ. 2019 ರಲ್ಲಿ ಅಭ್ಯರ್ಥಿ ಆಗಿದ್ದೆ, ಸೋತಿದ್ದೆ. ಈಗಲೂ ನನ್ನ ಸ್ಪರ್ಧೆಗೆ ಸಹಜವಾಗಿ ಮಂಡ್ಯ ಮುಖಂಡರ ಒತ್ತಾಯ ಇದೆ. ಕಳೆದ ನಾಲ್ಕು ದಿನಗಳಿಂದಲೂ ನಾನು ಗಮನಿಸುತ್ತಿದ್ದೇನೆ. ನಾನು ಯೂ ಟರ್ನ್ ಹೊಡೆಯಲ್ಲ. ನನ್ನ ನಿರ್ಧಾರದಲ್ಲಿ ನನಗೆ ಸ್ಪಷ್ಟತೆ ಇದೆ. ನಾನು ಮಂಡ್ಯ ಆಕಾಂಕ್ಷಿ ಅಲ್ಲ ಎಂದರು. ಇದನ್ನೂ ಓದಿ: ಬೆಂಗಳೂರು ರೈಲುಗಳು ಹೈಟೆಕ್- 6 ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆ ಜಾರಿ
Advertisement
Advertisement
ನೀವು ಬರಬೇಕು, ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಂಡ್ಯ ಮುಖಂಡರು, ಕಾರ್ಯಕರ್ತರು ಕರೆದರು. ಈ ಒತ್ತಡದ ಕಾರಣವಾಗಿ ನಾನು ಮಂಡ್ಯ ಭಾಗದಲ್ಲಿ ಓಡಾಡಿದ್ದೆ. ಮೈತ್ರಿ ಬಲಪಡಿಸಬೇಕು. ಮತ್ತೆ ಮೋದಿಯವರು ಪ್ರಧಾನಿ ಆಗಬೇಕು. ನನ್ನ ಗಮನ 28 ಕ್ಷೇತ್ರಗಳ ಕಡೆಯೂ ಇರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನಿಮ್ಮ ಪೋಷಕರು ನನಗೆ ಮತ ಹಾಕದಿದ್ರೆ 2 ದಿನ ಊಟ ಮಾಡ್ಬೇಡಿ- ಶಾಸಕರ ವಿವಾದಾತ್ಮಕ ಹೇಳಿಕೆ
Advertisement
Advertisement
ಅಮಿತ್ ಶಾ (Amit Shah) ರಾಜ್ಯ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೇಂದ್ರದ ಗೃಹ ಸಚಿವರು ಮೈಸೂರಿಗೆ ಬಂದಿದ್ದಾರೆ. ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಸ್ವಾಗತ. ಕುಮಾರಸ್ವಾಮಿ (HD Kumaraswamy) ಅವರಿಗೆ ಸ್ವಲ್ಪ ಆರೋಗ್ಯದ ಸಮಸ್ಯೆ ಇದೆ, ರೆಸ್ಟ್‌ನಲ್ಲಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡುತ್ತಿಲ್ಲ. ಈ ವಿಚಾರವನ್ನು ಅಮಿತ್ ಶಾ ಅವರಿಗೆ ದೂರವಾಣಿ ಕರೆ ಮಾಡಿ ಕುಮಾರಣ್ಣ ತಿಳಿಸಿದ್ದಾರೆ. ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ರೆಸ್ಟ್ ಮಾಡುತ್ತಾರೆ. ಸೋಮವಾರ ಅಧಿವೇಶನದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಶಾಸಕ ಭರತ್ ರೆಡ್ಡಿ ಮನೆ ಮೇಲೆ ಮುಂದುವರಿದ ಇ.ಡಿ ದಾಳಿ