ಮಂಗಳೂರು: ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ. ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ತಿಳಿಸಿದ್ದಾರೆ.
ಉತ್ತರ ಕನ್ನಡ ಬಿಜೆಪಿ ಟಿಕೆಟ್ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ. ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪುತ್ತಿಲ ಪರಿವಾರ ಮೋದಿ ಪರಿವಾರದ ಜೊತೆ ವಿಲೀನ
ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವ ವಿಚಾರ ಸದ್ಯ ವದಂತಿಯಷ್ಟೆ. 2014, 2019 ರಲ್ಲೂ ಇಂತಹ ವದಂತಿ ಹರಡಿತ್ತು. ಈಗ 2024 ರಲ್ಲೂ ಅಂಥದ್ದೊಂದು ವದಂತಿ ಹರಡಿದೆ ಎಂದಿದ್ದಾರೆ.
ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ. ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಹತ್ತು ವರ್ಷಗಳಿಂದ ಕಾಪಾಡಿಕೊಂಡು ಬಂದಿರೋದನ್ನ ಸ್ವಲ್ಪ ಸಡಿಲ ಮಾಡ್ತೀನಿ. ಏನಾದ್ರು ಭಗವಂತನ ಇಚ್ಛೆ ಇದ್ದರೆ ಅದು ಆಗೇ ಆಗುತ್ತೆ. ಆದರೆ ಇದುವರೆಗೆ ನನ್ನನ್ನ ಯಾರೂ ಸಂಪರ್ಕಿಸಿಲ್ಲ, ನಾನೂ ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ರಾಜಕೀಯಕ್ಕೆ ಬಂದಾಗ ಜಾಸ್ತಿ ಟೀಕೆ ಎದುರಿಸಬೇಕು: ಯದುವೀರ್ ಒಡೆಯರ್