ಮಹದಾಯಿ ಯೋಜನೆಗೆ ಡಿಪಿಆರ್‌ ಆಗಿದೆ; ಕಾಂಗ್ರೆಸ್‌ ಟೀಕೆಗೆ ತಲೆಕೆಡಿಸಿಕೊಳ್ಳಲ್ಲ – ಸಿಎಂ

Public TV
2 Min Read
BASAVARAJ BOMMAI 1

ಹುಬ್ಬಳ್ಳಿ: ಮಹದಾಯಿ ಯೋಜನೆಗೆ (Mahadayi Project) ಡಿಪಿಆರ್‌ ಆಗಿದೆ. ಕಾಂಗ್ರೆಸ್‌ (Congress) ಟೀಕೆ-ಟಿಪ್ಪಣಿಗೆ ತಲೆಕೆಡಿಸಿಕೊಳ್ಳಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿರುಗೇಟು ನೀಡಿದ್ದಾರೆ.

ಮಹದಾಯಿ ಯೋಜನೆಗಾಗಿ ಹುಬ್ಬಳ್ಳಿಯಲ್ಲಿ (Hubballi) ನಾಳೆ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ ಕೈಗೊಂಡಿದೆ. ಈ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಬೊಮ್ಮಾಯಿ, ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಗ್ರೀನ್ ಸಿಗ್ನಲ್ ಆದೇಶದಲ್ಲಿ ಕೆಳಗಡೆ ಸಹಿ ಇದೆ.‌ ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಎಂಬುದು ಗೊತ್ತಿಲ್ಲ. ಮಹದಾಯಿಗಾಗಿ ನಾವು ಹೋರಾಟ ಮಾಡಿದ್ವಿ. ಈಗ ಆ ಹೋರಾಟ ತಾರ್ಕಿಕ ಜಯ ಸಿಕ್ಕಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇನ್ನು 15 ದಿನಗಳಲ್ಲಿ ಪಕ್ಷದ ಪ್ರಣಾಳಿಕೆ ರಿಲೀಸ್ – ಜನಾರ್ದನ ರೆಡ್ಡಿ

Mahadayi 4

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 20-25 ವರ್ಷಗಳ ನಮ್ಮ ಹೋರಾಟಕ್ಕೆ ಫಲ ಸಿಕ್ಕಿದೆ. ಇಂತಹ ಸಂದರ್ಭಗಳಲ್ಲಿ ಲೋಪ ಹುಡುಕುವುದು ಅವರ ಮನಸ್ಥಿತಿ ಸೂಚಿಸುತ್ತೆ. ಅವರ ಟೀಕೆ-ಟಿಪ್ಪಣಿಗಳ ಬಗ್ಗೆ ತಲೆಕೆಡೆಸಿಕೊಳ್ಳುವುದಿಲ್ಲ. ಡಿಪಿಆರ್ ಆಗಿದ್ದು, ಎಂಓಎಫ್ ಕ್ಲಿಯರೆನ್ಸ್ ತೆಗೆದುಕೊಂಡು ಟೆಂಡರ್ ಕರೆದು ಕಾಮಗಾರಿ ಆರಂಭಿಸುತ್ತವೆ ಎಂದು ಹೇಳಿದ್ದಾರೆ.

ಪಂಚಮಸಾಲಿ, ಒಕ್ಕಲಿಗ ಮೀಸಲಾತಿ ಹೆಚ್ಚಳ ವಿಚಾರವಾಗಿ ಮಾತನಾಡಿದ ಅವರು, ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕು ಆಗಲ್ಲ. ಇದು‌ ಮಧ್ಯಂತರ ವರದಿ ಇದೆ. ಅಂತಿಮ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಇದರಲ್ಲಿ ನಮ್ಮ ಸರ್ಕಾರದ ಉದ್ದೇಶ ಹೇಳಿದ್ದೇವೆ. ಅಂತಿಮ ವರದಿಯಲ್ಲಿ ಅಂಕಿಅಂಶಗಳ ಮಾಹಿತಿ ನೀಡುತ್ತೇವೆ. ಮೀಸಲಾತಿ ಜಾರಿ ವಿಚಾರದಲ್ಲಿ ಸಂಬಂಧಪಟ್ಟವರ ಜೊತೆ ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸಿ.ಟಿ ರವಿ ಒಬ್ಬ ಕುಡುಕ, ಗಾಂಜಾನೂ ಹೊಡಿತಾರೆ: ಬಿ.ಕೆ ಹರಿಪ್ರಸಾದ್

ಯಾವುದೇ ಕಾರಣಕ್ಕೂ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಕೆಲ ವರ್ಗದ ಜನರಿಗೆ ಶೈಕ್ಷಣಿಕ- ಉದ್ಯೋಗದಲ್ಲಿ ಹಿನ್ನಡೆಯಾಗಿದ್ದು ನಿಜ. ಅವರಿಗೆ ನ್ಯಾಯ ಕೊಡುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಇದಕ್ಕೆ ಸ್ಪಷ್ಟೀಕರಣ ಬೇಕಾದ್ರೆ ಕೊಡುತ್ತೇವೆ. ಇದರಲ್ಲಿ ಯಾರಿಗೂ ಅನ್ಯಾಯ ಮಾಡುವ ಪ್ರಶ್ನೆಯಿಲ್ಲ. ವಿರೋಧ ಪಕ್ಷದವರು ತಾವು ಅಧಿಕಾರದಲ್ಲಿ ಇದ್ದಾಗ ಈ ಬೇಡಿಕೆ ಈಡೇರಿಸಲು ಆಗಲಿಲ್ಲ. ಈಗ ನಾವು ಮಾಡುತ್ತಿರೋದ್ರಿಂದ ಸಮಸ್ಯೆಯಾಗಿದೆ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *