ಮಂಡ್ಯ: ಹಿರಿಯ ನಟ ಅಂಬರೀಶ್ ಅವರು ಬದುಕಿದ್ದಾಗ ಅವರ ಅತ್ಯಾಪ್ತರಾಗಿದ್ದ ಅಮರಾವತಿ ಚಂದ್ರಶೇಖರ್ ಇದೀಗ ಸುಮಲತಾ ವಿರುದ್ಧ ತೊಡೆತಟ್ಟಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಅಮರಾವತಿ ಚಂದ್ರಶೇಖರ್ ಕೆಂಡಾಮಂಡಲವಾಗಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಮಲತಾ ಪರ ಪ್ರಚಾರ ಮಾಡುತ್ತಿರುವ ಕಾಂಗ್ರೆಸ್‍ನವರ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಚಂದ್ರಶೇಖರ್ ಅವರ ಅಂಬರೀಶ್ ಬದುಕಿದ್ದಾಗ ಅವರಿಗೆ ತುಂಬಾ ಆತ್ಮೀಯರಾಗಿದ್ದರು. ಅಂಬರೀಶ್ ಮಂಡ್ಯಕ್ಕೆ ಆಗಮಿಸಿದಾಗಲೆಲ್ಲ ಅಮರಾವತಿ ಚಂದ್ರಶೇಖರ್ ಮನೆಯಲ್ಲೇ ವಾಸ್ತವ್ಯ ಹೂಡುತ್ತಿದ್ದರು. ಆದರೆ ಈಗ ಕಾಂಗ್ರೆಸ್ ಕಾರ್ಯಕರ್ತರು ಸುಮಲತಾ ಪರವಾಗಿ ಬಹಿರಂಗ ಪ್ರಚಾರ ಮಾಡುತ್ತಿದ್ದಾರೆ ಎಂದು ಕೋಪಗೊಂಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್ ಗೆ ತರಾಟೆ ತೆಗೆದುಕೊಂಡಿದ್ದು, ಲೋಕಸಭಾ ಚುನಾವಣೆಗೂ ಮೊದಲೇ ಸುಮಲತಾ ಪರ ಕೆಲಸ ಮಾಡದಂತೆ ಕಾರ್ಯಕರ್ತರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.