ಚಂಡೀಗಢ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸುಮಾರು ಒಂದೂವರೆ ತಿಂಗಳ ಬಳಿಕ ಪಂಜಾಬ್‍ನ ಹಿರಿಯ ರಾಜಕೀಯ ನಾಯಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೆ ಹೊಸ ಪಕ್ಷವನ್ನು ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ ತೊರೆದ ಒಂದು ತಿಂಗಳ ನಂತರ, ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂದು ತಮ್ಮ ಹೊಸ ಪಕ್ಷದ ಹೆಸರನ್ನು ಪಂಜಾಬ್ ಲೋಕ ಕಾಂಗ್ರೆಸ್ ಎಂದು ಬಹಿರಂಗಪಡಿಸಿದ್ದಾರೆ. ಪಕ್ಷದ ನೋಂದಣಿಯು ಭಾರತದ ಚುನಾವಣಾ ಆಯೋಗದ ಅನುಮೋದನೆಗೆ ಬಾಕಿ ಇದೆ. ಇದನ್ನೂ ಓದಿ: ಗೂಗಲ್ ಸರ್ಚ್‍ನಲ್ಲಿ ಸಿಕ್ಕ ಫ್ಲಿಪ್ಕಾರ್ಟ್ ನಂಬರ್ – ಕರೆ ಮಾಡಿ 2 ಲಕ್ಷ ಕಳ್ಕೊಂಡ
Advertisement
Advertisement
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಂದು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಪಂಜಾಬ್ ಲೋಕ್ ಕಾಂಗ್ರೆಸ್ ಎನ್ನುವ ಹೊಸ ಪಕ್ಷವನ್ನು ಕಟ್ಟಿದ್ದಾರೆ. ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಸಿಂಗ್, ನನ್ನ ತೀವ್ರವಾದ ಸಂಯಮದ ಹೊರತಾಗಿಯೂ ಮತ್ತು ಪಂಜಾಬ್‍ನ ಬಹುತೇಕ ಎಲ್ಲಾ ಸಂಸದರ ಒಮ್ಮತದ ಸಲಹೆಯ ಹೊರತಾಗಿಯೂ, ನೀವು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಬಾಜ್ವಾ ಮತ್ತು ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಸಾರ್ವಜನಿಕವಾಗಿ ಅಪ್ಪಿಕೊಂಡಿದ್ದ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲು ಆಯ್ಕೆ ಮಾಡಿಕೊಂಡಿದ್ದೀರಿ. ಇದನ್ನೂ ಓದಿ: ಅಪ್ಪು ಜೊತೆಗಿನ ಲಾಸ್ಟ್ ಸೆಲ್ಫಿ ಶೇರ್ ಮಾಡಿದ ರಾಘಣ್ಣ
Advertisement
Advertisement
1954ರಲ್ಲಿ ನಾವು ಶಾಲೆಯಲ್ಲಿ ಜತೆಯಾಗಿದ್ದೆವು, ಅಂದರೆ ಈಗ 67 ವರ್ಷಗಳು. ನಾನು ನನ್ನ ಮಕ್ಕಳಂತೆ ತೀವ್ರವಾಗಿ ಪ್ರೀತಿಸುವ ನಿಮ್ಮ ಮಕ್ಕಳ ಅಪ್ಪನನ್ನು ಚೆನ್ನಾಗಿ ಬಲ್ಲೆ. ನಿಮ್ಮ ನಡತೆಯಿಂದ ನನಗೆ ನೋವಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ. ನನ್ನ ರಾಜ್ಯ ಮತ್ತು ನನ್ನ ದೇಶದ ಹಿತದೃಷ್ಟಿಯಿಂದ ನಾನು ಈ ಮೂಲಕ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‍ಗೆ ರಾಜೀನಾಮೆ ನೀಡುತ್ತೇನೆ ಎಂದು ಸಿಂಗ್ ಹೇಳಿದ್ದಾರೆ.