ಚಂಡೀಗಢ: ತಮ್ಮ ರಾಜೀನಾಮೆಗೆ ಕಾರಣರಾದ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತು ಸಿಧು ವಿರುದ್ಧ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಾಗ್ದಾಳಿ ನಡೆಸಿದ್ದು, ಮುಂದಿನ ಚುನಾವಣೆಯಲ್ಲಿ ಗೆಲ್ಲಲ್ಲು ಬಿಡುವುದಿಲ್ಲ ಎಂದು ಸವಾಲು ಹಾಕಿದ್ದಾರೆ.
Advertisement
ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ಅನುಭವದ ಕೊರತೆ ಇದೆ ಇದನ್ನು ಸಿಧು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಹೆಚ್‍ಡಿಕೆ ಟಕ್ಕರ್ – ಸಿ.ಎಂ ಇಬ್ರಾಹಿಂ ಜೆಡಿಎಸ್ ಸೇರೋದು ಪಕ್ಕಾ!
Advertisement
Advertisement
2022ರ ವಿಧಾನಸಭೆ ಚುನಾವಣೆಯಲ್ಲಿ ಸಿಧು ಸೋಲಿಸಲು ಪ್ರಬಲ ಅಭ್ಯರ್ಥಿಯನ್ನು ಹಾಕಲಿದ್ದೇನೆ. ಸಿಧು ಸಿಎಂ ಅಭ್ಯರ್ಥಿಯಾಗುವುದನ್ನು ತಪ್ಪಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಿದ್ದೇನೆ, ಅವನೊಬ್ಬ ಅಪಾಯಕಾರಿ ವ್ಯಕ್ತಿಯಾಗಿದ್ದು, ಅವನಿಂದ ರಾಜ್ಯವನ್ನು ರಕ್ಷಿಸಬೇಕಿದೆ ಎಂದು ಸಿಧು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: 17 ವರ್ಷದ ದಾಂಪತ್ಯ ಅಂತ್ಯಗೊಳಿಸಿ ಡೈವೋರ್ಸ್ ಪಾರ್ಟಿ ಮಾಡಿದ ಮಹಿಳೆ
Advertisement
ಮೂರು ವಾರಗಳ ಹಿಂದೆಯೇ ನಾನು ರಾಜೀನಾಮೆ ನೀಡಿದ್ದೆ, ಆದರೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹುದ್ದೆಯಲ್ಲಿ ಮುಂದುವರಿಯಲು ಸೂಚಿಸಿದ್ದರು. ಸೈನಿಕನಾಗಿ ನಾನು ಹೇಗೆ ಕೆಲಸ ಮಾಡಬೇಕು, ಹೇಗೆ ಹಿಂತಿರುಗಬೇಕು ಎಂದು ಗೊತ್ತಿದೆ ಎಂದರು. ಇನ್ನೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ನನ್ನ ಮಕ್ಕಳಿದ್ದಾಗೆ, ಅವರಿಗೆ ಅನುಭವ ಇಲ್ಲ, ಅವರಿಗೆ ತಪ್ಪು ಸಲಹೆಗಳನ್ನು ನೀಡಲಾಗುತ್ತಿದೆ. ಯಾವುದು ಹೀಗೆ ಆಗಬಾರದು, ಇದರಿಂದ ನನಗೆ ದುಃಖವಾಗಿದೆ ಎಂದು ಹೇಳಿದ್ದಾರೆ.