Latest

ನನ್ನನ್ನು ಅವಮಾನ ಮಾಡಲಾಗಿದೆ – ಸಿಎಂ ಸ್ಥಾನಕ್ಕೆ ಅಮರೀಂದರ್ ಸಿಂಗ್ ರಾಜೀನಾಮೆ

Published

on

Share this

– ಭವಿಷ್ಯದಲ್ಲಿ ನನ್ನ ಹಾದಿ ನಾನು ಹುಡುಕಿಕೊಳ್ಳುತ್ತೇನೆ

ಚಂಡೀಗಢ: ಕಾಂಗ್ರೆಸ್ ಪಕ್ಷದಲ್ಲಿ ಹಲವು ದಿನಗಳಿಂದ ಎದ್ದಿದ್ದ ಬಂಡಾಯದಿಂದ ಇದೀಗ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ.

ಪಂಬಾಜ್ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಹಲವು ಬಿಕ್ಕಟ್ಟುಗಳ ನಡುವೆ ಹೈಕಮಾಂಡ್ ಅಮರೀಂದರ್ ಸಿಂಗ್ ಅವರ ರಾಜೀನಾಮೆ ಪಡೆದಿದೆ. ರಾಜ್ಯಪಾಲರನ್ನು ಭೇಟಿಯಾದ ಅಮರೀಂದರ್ ಸಿಂಗ್ ರಾಜೀನಾಮೆ ಪತ್ರ ನೀಡಿದ್ದಾರೆ. ಬಳಿಕ ಮಾತನಾಡಿ, ಕಾಂಗ್ರೆಸ್ ತೊರೆಯುವ ಮುನ್ಸೂಚನೆ ಕೂಡ ನೀಡಿದ್ದಾರೆ.

ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಅಮರೀಂದರ್ ಸಿಂಗ್, ತಾನು ಅವಮಾನಕ್ಕೆ ಒಳಗಾಗುತ್ತೇನೆ ಎಂದನಿಸಿತು, ಆದ್ದರಿಂದ ನಾನು ರಾಜೀನಾಮೆ ನೀಡಿದೆ ಎಂದು ಹೇಳಿದ್ದಾರೆ. ನಾನು ರಾಜೀನಾಮೆ ನೀಡಲು ಹೋಗುತ್ತಿದ್ದೇನೆ ಎಂದು ಈಗಾಗಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ತಿಳಿಸಿದ್ದೇನೆ. ಇದು ಮೂರನೇ ಬಾರಿ ನಡೆಯುತ್ತಿದೆ. ನಾನು ಅವಮಾನಕ್ಕೆ ಒಳಗಾಗಿದ್ದೇನೆ. ಅವರು ಯಾರನ್ನು ನಂಬಬಲ್ಲರೋ ಅವರನ್ನು ಮುಖ್ಯಮಂತ್ರಿ ಮಾಡಬಹುದು. ಕಾಂಗ್ರೆಸ್ ಅಧ್ಯಕ್ಷೆ ಏನು ನಿರ್ಧಾರ ಮಾಡುತ್ತಾರೋ ಅದು ಸರಿ. ನಾನು ಕಾಂಗ್ರೆಸ್ ಪಕ್ಷದೊಂದಿಗೆ ಇದ್ದೇನೆ, ನನ್ನ ಬೆಂಬಲಿತರನ್ನು ಭೇಟಿಯಾದ ಬಳಿಕ ನಾನು ನನ್ನ ಮುಂದಿನ ಜೀವನದ ರಾಜಕೀಯದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

ತನ್ನ ತಂದೆ ರಾಜೀನಾಮೆ ನೀಡುವ ಬಗ್ಗೆ ಪುತ್ರ ರಣೀಂದರ್ ಸಿಂಗ್ ಕೂಡಾ ಮಾಹಿತಿ ನೀಡಿದ್ದಾರೆ. ನನ್ನ ತಂದೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಅವರ ಜೊತೆಯಾಗಲು ನನಗೆ ಹೆಮ್ಮೆಯಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 3ನೇ ಸಾಲಿನಲ್ಲಿ ಕೂತಿದ್ದಕ್ಕೆ ವಿಶೇಷ ಅರ್ಥ ಬೇಕಿಲ್ಲ: ಶೆಟ್ಟರ್

ಅಮರೀಂದರ್ ಸಿಂಗ್‍ರನ್ನು ಬದಲಾಯಿಸುವಂತೆ ಅನೇಕ ಶಾಸಕರು ಹೈಕಮಾಂಡ್‍ಗೆ ಒತ್ತಡ ಹೇರಿರುವ ಪರಿಣಾಮ ಹೈಕಮಾಂಡ್ ರಾಜೀನಾಮೆ ನೀಡಲು ತಿಳಿಸಲಾಗಿತ್ತು. ಪಂಜಾಬ್ ವಿಧಾನಸಬೇ ಚುನಾವಣೆ ಕೇವಲ 4 ತಿಂಗಳು ಬಾಕಿ ಉಳೀದಿದ್ದು, ಅಧಿಕಾ ಹಸ್ತಾಂತರದ ಪ್ರಸಂಗ ಕುತೂಹಲ ಮೂಡಿಸಿದೆ. ಬಿಜೆಪಿ ಹಾದಿಯನ್ನೇ ಕಾಂಗ್ರೆಸ್ ಪಕ್ಷ ಕೂಡ ಹಿಡಿದಂತಿದೆ. ಕೆಲದಿನಗಳ ಹಿಂದೆ ಬಿಜೆಪಿ, ಕರ್ನಾಟಕ, ಗುಜಾರಾತ್ ಸೇರಿದಂತೆ ಕೆಲ ರಾಜ್ಯಗಳ ಮುಖ್ಯಮಂತ್ರಿಗಳ ಬದಲಾವಣೆ ಮಾಡಿದೆ. ಇದನ್ನೂ ಓದಿ: ನಾಯಕತ್ವ ಬದಲಾವಣೆಗೆ ಮುಂದಾದ ಕಾಂಗ್ರೆಸ್- ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆ?

ಪಂಜಾಬ್ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಆಡಳಿತಾರೂಢ ಕಾಂಗ್ರೆಸ್ಸಿನಲ್ಲಿ ಸಿಎಂ ವಿರುದ್ಧ ಹಲವು ಶಾಸಕರು ಹಾಗೂ ಸಚಿವರು ಬಂಡಾಯವೆದ್ದಿದ್ದರು. 2017ರ ವಿಧಾನಸಭೆ ಚುನಾವಣೆ ಮುನ್ನ ಅಮರೀಂದರ್ ಸಿಂಗ್ ನೀಡಿದ್ದ ಭರವಸೆಗಳು ರಾಜ್ಯದಲ್ಲಿ ಈಡೇರದೆ ಇರುವುದೇ ಬಂಡಾಯಕ್ಕೆ ಪ್ರಮುಖ ಕಾರಣವಾಗಿದ್ದು, ಅಮರೀಂದರ್ ನಾಯಕತ್ವದಲ್ಲಿ ತಮಗೆ ವಿಶ್ವಾಸವಿಲ್ಲ ಎಂದು ಸಚಿವರು ಮತ್ತು ಶಾಸಕರು ಹೈಕಮಾಂಡ್‍ಗೆ ದೂರು ನೀಡಿದ್ದರು ಎಂದು ಈ ಹಿಂದೆ ಆರೋಪ ಕೇಳಿ ಬಂದಿತ್ತು. ಇದನ್ನೂ ಓದಿ:  ಸಿಎಂ ಬಸವರಾಜ ಬೊಮ್ಮಾಯಿಗೆ ಕೊಲೆ ಬೆದರಿಕೆ

ಕೆಲ ತಿಂಗಳ ಹಿಂದೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಸಿಎಂ ವಿರುದ್ಧ ಹೈಕಮಾಂಡ್‍ಗೆ ದೂರು ನೀಡಿದ್ದರು. ಈ ಸಂದರ್ಭ ಅಮರೀಂದರ್ ಸಿಂಗ್ ವಿರುದ್ಧ 24ಕ್ಕೂ ಹೆಚ್ಚು ಶಾಸಕರು ಅಸಮಾಧಾನ ಹೊರಹಾಕಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಪಂಜಾಬ್‍ನ ಮುಖ್ಯಮಂತ್ರಿ ಅಮರೀಂದರ್ ರಾಜೀನಾಮೆ ಕೊಟ್ಟಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications