ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಕ್ಯಾ. ಅಮರೀಂದರ್ ಸಿಂಗ್ ಅವರ ಮುಂದಿನ ನಡೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಅಮರೀಂದರ್ ಸಿಂಗ್ ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳು ಎದ್ದಿದ್ದು, ಇದೀಗ ಸ್ವತಃ ಮಾಜಿ ಸಿಎಂ ಅವರೇ ಸ್ಪಷ್ಟನೆ ನೀಡಿದ್ದಾರೆ.
Advertisement
ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಅಮರೀಂದರ್ ಸಿಂಗ್, ನಾನು ಬಿಜೆಪಿಗೆ ಸೇರಲ್ಲ, ಆದರೆ ಕಾಂಗ್ರೆಸ್ ನಲ್ಲಿಯೂ ಇರಲ್ಲ. ಸದ್ಯ ಪಕ್ಷದಲ್ಲಿಯೇ ಇದ್ದೀನಿ. ಆದರೆ ಇದೇ ಪಕ್ಷದಲ್ಲಿ ಮುಂದುವರಿಯುವುದಿಲ್ಲ ಎಂದು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ಭೇಟಿ ಮಾಡಿದ ಅಮರೀಂದರ್ ಸಿಂಗ್- ಬಿಜೆಪಿ ಸೇರುವ ವದಂತಿ?
Advertisement
ಪಕ್ಷದಲ್ಲಿನ ಒಳಜಗಳದಿಂದಾಗಿ ಸೆಪ್ಟೆಂಬರ್ 18ರಂದು ಅಮರೀಂದರ್ ಸಿಂಗ್ ಅವರು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಚರಣ್‍ಜಿತ್ ಸಿಂಗ್ ಛನ್ನಿ ನೂತನ ಸಿಎಂ ಆಗಿ ಪಂಜಾಬ್‍ನಲ್ಲಿ ಆಡಳಿತ ನಡೆಸುತ್ತಿದ್ದಾರೆ.
Advertisement
#WATCH | Former Punjab CM and Congress leader Captain Amarinder Singh reaches the residence of Union Home Minister Amit Shah in New Delhi pic.twitter.com/787frIaou7
— ANI (@ANI) September 29, 2021
Advertisement
ಕೆಲದಿನಗಳಿಂದ ಅಮರೀಂದರ್ ಸಿಂಗ್ ಪಂಜಾಬ್ ಕಾಂಗ್ರೆಸ್‍ನಿಂದ ಹೊರ ಬಂದು ಬಿಜೆಪಿ ಪಕ್ಷ ಸೇರಲು ಬಯಸಿದ್ದಾರೆ ಎಂಬ ವದಂತಿ ಹರಡಿತ್ತು. ಈ ವದಂತಿಗೆ ಪುಷ್ಠಿ ನೀಡುವಂತೆ ನಿನ್ನೆ ಗೃಹ ಸಚಿವ ಅಮಿತ್ ಶಾ ಅವರನ್ನು ಅಮರೀಂದರ್ ಸಿಂಗ್ ಭೇಟಿ ಮಾಡಿದ್ದು, ತೀವ್ರ ಕುತೂಹಲ ಹುಟ್ಟಿಸುವಂತೆ ಮಾಡಿತ್ತು. ಆದರೆ ಈ ಎಲ್ಲಾ ಊಹಾಪೋಹಗಳಿಗೆ ಇದೀಗ ಅಮರೀಂದರ್ ಸಿಂಗ್ ಅವರೇ ಸ್ಪಷ್ಟನೆ ನೀಡುವ ಮೂಲಕ ತೆರೆ ಎಳೆದಿದ್ದಾರೆ. ಇದನ್ನೂ ಓದಿ: ನನ್ನನ್ನು ಅವಮಾನ ಮಾಡಲಾಗಿದೆ – ಸಿಎಂ ಸ್ಥಾನಕ್ಕೆ ಅಮರೀಂದರ್ ಸಿಂಗ್ ರಾಜೀನಾಮೆ