LatestMain PostNational

ಕಾಂಗ್ರೆಸ್ ತೊರೆದ 8 ತಿಂಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರಾ ಅಮರಿಂದರ್ ಸಿಂಗ್?

Advertisements

ಚಂಡೀಗಢ: ಕಳೆದ ವರ್ಷ ಕಾಂಗ್ರೆಸ್ ತೊರೆದಿದ್ದ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ತಮ್ಮ ಬೆನ್ನು ಶಸ್ತ್ರಚಿಕಿತ್ಸೆಗಾಗಿ ಲಂಡನ್ ತೆರಳಿದ್ದರು. ಮುಂದಿನ ವಾರ ಅವರು ಲಂಡನ್‌ನಿಂದ ಭಾರತಕ್ಕೆ ಮರಳಲಿದ್ದು, ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: 2.5 ವರ್ಷಗಳ ಹಿಂದೆಯೇ ಸೇನಾ ನಾಯಕನಿಗೆ ಬಿಜೆಪಿ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದರೆ MVA ಹುಟ್ಟುತ್ತಿರಲಿಲ್ಲ: ಠಾಕ್ರೆ

ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು, 5 ದಶಕಗಳ ವರೆಗೆ ಕಾರ್ಯ ನಿರ್ವಹಿಸಿದ್ದ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು. ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರಿಗೆ ಸಿಂಗ್ ಬರೆದಿದ್ದ ಪತ್ರದಲ್ಲಿ, ತಾವು ನಾಯಕತ್ವದಲ್ಲಿ 3 ಬಾರಿ ಅವಮಾನಕ್ಕೊಳಗಾಗಿದ್ದೇನೆ. ಇನ್ನು ಮುಂದೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದರು.

3 ಬಾರಿ ಸಿಎಂ ಆಗಿದ್ದ ಅಮರಿಂದರ್ ಸಿಂಗ್ ಕಾಂಗ್ರೆಸ್‌ನಿಂದ ಅವಮಾನಕ್ಕೊಳಗಾದರೂ ಬಿಜೆಪಿ ಸೇರಲು ನಿರಾಕರಿಸಿದ್ದರು. ಕಳೆದ ವರ್ಷ ಕಾಂಗ್ರೆಸ್ ಅನ್ನು ತೊರೆದ ಬಳಿಕ ತಮ್ಮದೇ ಪಕ್ಷವನ್ನು ಪ್ರಾರಂಭಿಸಿದರು. ಏಪ್ರಿಲ್-ಮೇ ತಿಂಗಳಿನಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದರು. ಇದನ್ನೂ ಓದಿ: ದೇವೇಗೌಡ್ರು ಇಬ್ಬರ ಮೇಲೆ ಕೈ ಹಾಕ್ಕೊಂಡು ಹೋಗ್ತಾವ್ರೆ… ನಾಲ್ವರ ಮೇಲೆ ಹೋಗೋದು ಹತ್ತಿರದಲ್ಲೇ ಇದೆ: KN ರಾಜಣ್ಣ

ಅಮರಿಂದರ್ ಸಿಂಗ್ ಅವರ ಶಸ್ತ್ರಚಿಕಿತ್ಸೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದ್ದು, ಶೀಘ್ರವೇ ಅವರು ಬಿಜೆಪಿಗೆ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Live Tv

Leave a Reply

Your email address will not be published.

Back to top button