ಶ್ರೀನಗರ: ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆ ಅಮರನಾಥ ಯಾತ್ರೆಯನ್ನು ರದ್ದು ಮಾಡಲಾಗಿತ್ತು. ಆದರೆ ಮತ್ತೆ ಇದಕ್ಕೆ ಚಾಲನೆ ನೀಡಲಾಗಿದೆ. ಏಪ್ರಿಲ್ 11 ರಿಂದ ಅಮರನಾಥ ಯಾತ್ರೆಗೆ ಭಕ್ತಾದಿಗಳು ನೋಂದಣಿ ಮಾಡಿಕೊಳ್ಳಬಹುದು ಎಂದು ಅಮರನಾಥಜೀ ಪುಣ್ಯ ಕ್ಷೇತ್ರದ ಸಿಇಓ ನಿತೀಶ್ವರ್ ಕುಮಾರ್ ಹೇಳಿದ್ದಾರೆ.
Advertisement
ಜೂನ್ 30 ರಿಂದ ಆಗಸ್ಟ್ 11ರ ವರೆಗೂ ಯಾತ್ರೆ ನಡೆಸಲು ತೀರ್ಮಾನಿಸಲಾಗಿದ್ದು, ಯಾತ್ರೆ ಕೈಗೊಳ್ಳುವ ಭಕ್ತಾದಿಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಶ್ರೈನ್ ಬೋರ್ಡ್‍ನ ವೆಬ್‍ಸೈಟ್ ಅಥವಾ ಮೂಬೈಲ್ ಅಪ್ಲಿಕೇಶನ್ ಮೂಲಕ ನೋಂದಣಿ ಮಾಡಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ವಿಜಯನಗರದ ನೆಲದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ
Advertisement
Advertisement
ಕೊರೊನಾದಿಂದಾಗಿ ಕಳೆದ ಎರಡು ವರ್ಷದಿಂದ ಯಾತ್ರೆ ರದ್ದಾಗಿದ್ದು, ಈ ವರ್ಷ ಮೂರು ಲಕ್ಷ ಜನರು ಯಾತ್ರೆ ಮಾಡುವ ನಿರೀಕ್ಷೆಗಳಿದೆ. ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ 3,000 ಜನರು ಉಳಿದುಕೊಳ್ಳಲು ವ್ಯವಸ್ಥೆ ಇರುವ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗಿದೆ. ಅಲ್ಲಿ ಭಕ್ತಾಧಿಗಳು ತಂಗಲು ಅವಕಾಶ ಮಾಡಿಕೊಡಲಾಗಿದೆ.
Advertisement
2019 ಆಗಸ್ಟ್ 5 ರಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ದು ಮಾಡಿದ ಬಳಿಕ ಮೊದಲ ಬಾರಿ ಯಾತ್ರೆಯನ್ನು ಭದ್ರತೆಯ ಕಾರಣದಿಂದ ರದ್ದು ಮಾಡಲಾಗಿತ್ತು. ಇದಾದ ಬಳಿಕ ಎರಡು ವರ್ಷ ಕೊರೊನಾ ಕಾರಣಗಳಿಂದ ರದ್ದು ಮಾಡಲಾಗಿತ್ತು. ಕಳೆದ ಮೂರು ವರ್ಷಗಳಿಂದ ಅಮರನಾಥ ಯಾತ್ರೆ ನಡೆದಿರಲಿಲ್ಲ. ಇದನ್ನೂ ಓದಿ: ನದಿಗೆ ಹಾರಿ ಅರಣ್ಯಾಧಿಕಾರಿ ಆತ್ಮಹತ್ಯೆ?