LatestMain PostNational

ಇಂದಿನಿಂದ ಅಮರನಾಥ ಯಾತ್ರೆ ಪ್ರಾರಂಭ- ಯಾತ್ರೆ ಹೊರಟ 2,750 ಮಂದಿ

Advertisements

ಶ್ರೀನಗರ: ಸತತ 2 ವರ್ಷಗಳ ನಂತರ ಅಮರನಾಥ ಯಾತ್ರೆ ಮತ್ತೆ ಪ್ರಾರಂಭವಾಗಿದ್ದು, ಸುಮಾರು 2,750 ಯಾತ್ರಿಕರ ಬ್ಯಾಚ್ ಇಂದು ಯಾತ್ರೆಯನ್ನು ಪ್ರಾರಂಭಿಸಿದ್ದಾರೆ.

ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಾವಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗವನ್ನು ಹೊಂದಿರುವ ಗುಹಾ ದೇಗುಲ ಜಗತ್‍ಪ್ರಸಿದ್ಧವಾಗಿದೆ. ಅನಂತನಾಗ್ ಜಿಲ್ಲೆಯ ಪಹಲ್ಗಾಮ್‍ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್‍ನಲ್ಲಿ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲಾ ಅವರು ಯಾತ್ರೆಗೆ ಚಾಲನೆ ನೀಡಿದರು.

ಪ್ರಯಾಣವು ಬಹುತೇಕ ಕಾಲ್ನಡಿಗೆಯಲ್ಲೇ ಪ್ರಯಾಣಿಸುತ್ತಾರೆ, ಮಾರ್ಗದುದ್ದಕ್ಕೂ ಶೀಷ್‍ನಾಗ್ ಮತ್ತು ಪಂಚತಾರ್ಣಿಯಲ್ಲಿ ರಾತ್ರಿ ವ್ಯವಸ್ಥೆ ಮಾಡಲಾಗಿದೆ. 43 ದಿನಗಳ ಯಾತ್ರೆಯನ್ನು ಸುಗಮವಾಗಿ ನಡೆಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಬೇಸ್ ಕ್ಯಾಂಪ್‍ನಿಂದ 4,890 ಯಾತ್ರಾರ್ಥಿಗಳ ಮೊದಲ ಬ್ಯಾಚ್‍ಗೆ ಚಾಲನೆ ನೀಡಿದರು. ಅಮರನಾಥ ದೇಗುಲ ಮಂಡಳಿ (ಎಸ್‍ಎಎಸ್‍ಬಿ) ಸಹ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಆನ್‍ಲೈನ್ ದರ್ಶನಕ್ಕೆ ಅವಕಾಶ ಕಲ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:  ಅಮರನಾಥ ಯಾತ್ರೆಗೆ ಎರಡೇ ದಿನ: ಯಾತ್ರಾರ್ಥಿಗಳಿಗೆ ಆಧಾರ್, ಸರ್ಕಾರಿ ಗುರುತಿನ ಚೀಟಿ ಕಡ್ಡಾಯ

ಜಮ್ಮು ಮತ್ತು ಕಾಶ್ಮೀರ ಆಡಳಿತವು ಪವಿತ್ರ ಗುಹೆಗೆ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳಲ್ಲಿ ಭಾರೀ ಭದ್ರತೆಯನ್ನು ಒದಗಿಸುವ ಮೂಲಕ ಉಗ್ರರ ದಾಳಿಯನ್ನು ತಪ್ಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಕೆಲವೇ ದಿನ – ಗಡಿಯಲ್ಲಿ ಶೋಧ ಕಾರ್ಯ ಚುರುಕು

ಕೇಂದ್ರಾಡಳಿತ ಪ್ರದೇಶದ ಆರೋಗ್ಯ ಇಲಾಖೆಯು ಯಾತ್ರಾರ್ಥಿಗಳಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ವಿಶೇಷ ವ್ಯವಸ್ಥೆಗಳನ್ನು ಮಾಡಿದೆ. 109 ಬೇಸಿಕ್ ಲೈಫ್ ಸಪೋರ್ಟ್ ಅಂಬುಲೆನ್ಸ್‍ಗಳ ವ್ಯವಸ್ಥೆ ಸಹ ಇದೆ. ಪ್ರಾಥಮಿಕ ಚಿಕಿತ್ಸೆಯ ಸಾಮಾಗ್ರಿಗಳನ್ನು ಯಾತ್ರೆ ಮಾರ್ಗ ಮಧ್ಯೆ ಇಡಲಾಗಿದೆ. ಆಗಸ್ಟ್ 11ರವರೆಗೆ ಯಾತ್ರಿಕರು ಯಾತ್ರೆ ಮಾಡಬಹುದು.

Live Tv

Leave a Reply

Your email address will not be published.

Back to top button