ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ – ಹೆಜ್ಜೆ ಹೆಜ್ಜೆಗೂ ಪೊಲೀಸರ ನಿಗಾ

Public TV
1 Min Read
amarnath yatra

ಶ್ರೀನಗರ: ಜುಲೈ 3ರಿಂದ ಅಮರನಾಥ ಯಾತ್ರೆ (Amarnath Yatra) ಪ್ರಾರಂಭವಾಗಲಿದ್ದು, ಜಮ್ಮು ಕಾಶ್ಮೀರದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ತಪಾಸಣೆ ನಡೆಸಲು ಹೆಚ್ಚುವರಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ.

ಪಹಲ್ಗಾಮ್ ಉಗ್ರರ ದಾಳಿ ಬಳಿಕ, ಯಾತ್ರಾರ್ಥಿಗಳ (Pilgrims) ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಜಮ್ಮುವಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅರೆಸೇನಾ ಪಡೆಗಳು ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿದ್ದು, ಯಾತ್ರಾರ್ಥಿಗಳಿಗೆ ಸುಗಮ ಯಾತ್ರೆಯ ಅನುಭವ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಚಾರ್‌ಧಾಮ್ ಯಾತ್ರೆಗಿದ್ದ ನಿರ್ಬಂಧ ತೆರವು

Amarnath Yatra

ರಾಷ್ಟ್ರೀಯ ಹೆದ್ದಾರಿಗಳು, ನಗರದ ಹೊರವಲಯ, ಮೂಲ ಶಿಬಿರ ಭಗವತಿ ನಗರಕ್ಕೆ ಹೋಗುವ ಮಾರ್ಗಗಳು ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿದ್ದು, ದಿನದ 24 ಘಂಟೆಗಳ ಕಾಲ ನಿಗಾ ವಹಿಸಲಿದ್ದಾರೆ. ಇನ್ನೂ ಹೋಟೆಲ್, ಗೆಸ್ಟ್ ಹೌಸ್‌ಗಳ ಮೇಲೆಯೂ ನಿಗಾ ವಹಿಸಲಾಗಿದೆ. ಇದನ್ನೂ ಓದಿ: ಕಸದ ಲಾರಿಯಲ್ಲಿ ಶವ ಪತ್ತೆ | ದಿನಾ ಕುಡಿದು ಬಂದು ರಂಪಾಟ ಮಾಡಿದ್ದಕ್ಕೆ ಮಹಿಳೆಯ ಕೊಲೆ!

ಅಮರನಾಥ ಯಾತ್ರೆಗೆ 50 ಸಾವಿರ ಯಾತ್ರಾರ್ಥಿಗಳಿಗೆ ವಸತಿ ಸೌಲಭ್ಯ ಮಾಡಿರುವುದಾಗಿ ಜಮ್ಮು ಕಾಶ್ಮೀರ ಆಡಳಿತ ಮಂಡಳಿ ತಿಳಿಸಿದೆ. ಪಹಲ್ಗಾಮ್ ದಾಳಿಯ ಬಳಿಕ ಅಮರನಾಥ ಯಾತ್ರೆಗೆ ನೋಂದಾಯಿಸಿಕೊಳ್ಳುವ ಭಕ್ತರ ಸಂಖ್ಯೆ 10%ನಷ್ಟು ಇಳಿಕೆಯಾಗಿದೆ ಎಂದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದ್ದಾರೆ. ಇದನ್ನೂ ಓದಿ: ಗಮನಿಸಿ, ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಲಿಸ್ಟ್‌ ಔಟ್‌

Share This Article