ಶ್ರೀನಗರ: ಕಾಶ್ಮೀರ ಕಣಿವೆ ಪ್ರದೇಶದ ಸುತ್ತಮುತ್ತ ಭಾರೀ ಮಳೆ ಆಗುತ್ತಿದೆ. ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.
ಹವಾಮಾನ ವೈಪರೀತ್ಯದಿಂದಾಗಿ ಪಂಚತಾರ್ಣಿ ಮತ್ತು ಅಮರನಾಥ ಗುಹೆಯ ನಡುವೆ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಹವಾಮಾನ ಸುಧಾರಿಸಿದ ನಂತರ ಯಾತ್ರೆಯನ್ನು ಪುನರಾರಂಭಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಗುಹಾಂತರ ದೇಗುಲದ ಸುತ್ತಲಿನ ಪರ್ವತಗಳಲ್ಲಿ ಇಂದು ಭಾರೀ ಮಳೆಯಾಗಿದ್ದು, ಇದರಿಂದಾಗಿ ಸಮೀಪದ ನದಿಯಲ್ಲಿ ನೀರಿನ ಮಟ್ಟವೂ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಅಮರನಾಥ ಗುಹೆ ಸುತ್ತ ಪ್ರವಾಹದ ಭೀತಿ ಎದುರಾಗಿದೆ. ಈಗಾಗಲೇ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆ: ನೈಸರ್ಗಿಕ ವಿಕೋಪದಿಂದ 8 ಯಾತ್ರಾರ್ಥಿಗಳು ಸಾವು
ಯಾತ್ರಾರ್ಥಿಗಳನ್ನು ಪಂಚತಾರ್ಣಿ ಶಿಬಿರಕ್ಕೆ ರವಾನಿಸಲಾಗಿದ್ದು, ಪಂಚತಾರ್ಣಿಯಿಂದ ಐಟಿಬಿಪಿ ಯೋಧರು ನಾಲ್ಕು ಸಾವಿರ ಯಾತ್ರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಜುಲೈ 28 ರವರೆಗೆ ಶ್ರೀನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ – ಮೂರು ತಾಲೂಕು ಬಂದ್‌ಗೆ ಕರೆ