ಪ್ರತಿಕೂಲ ಹವಾಮಾನ- ತಾತ್ಕಾಲಿಕವಾಗಿ ಅಮರನಾಥ ಯಾತ್ರೆ ರದ್ದು

Public TV
1 Min Read
Amarnath Yatra

ನವದೆಹಲಿ: ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು (Amarnath Yatra-2023) ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir Weather) ಹವಾಮಾನ ವೈಪರೀತ್ಯದಿಂದ ನಿರಂತರವಾಗಿ ಹಿಮ ಮತ್ತು ಮಳೆ ಬೀಳುತ್ತಿದೆ. ಹೀಗಾಗಿ ಇನ್ನೆರಡು ದಿನ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಯಾತ್ರೆಗೆ ಅನುಕೂಲಕರ ವಾತಾವರಣವಿಲ್ಲದ ಕಾರಣ ಅಧಿಕಾರಿಗಳು ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ.

62 ದಿನಗಳ ಪವಿತ್ರ ಅಮರನಾಥ ಯಾತ್ರೆ ಜುಲೈ 1 ರಿಂದ ಆರಂಭವಾಗಿದೆ. ಮೊದಲ ಬ್ಯಾಚ್‍ನಲ್ಲಿ 7 ರಿಂದ 8 ಸಾವಿರ ಮಂದಿ ಯಾತ್ರಾರ್ಥಿಗಳಿದ್ದಾರೆ. ಬೇಸ್ ಕ್ಯಾಂಪ್‍ನಿಂದ ಸುಮಾರು 13,000 ಅಡಿ ಎತ್ತರದಲ್ಲಿರುವ ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ ಪವಿತ್ರ ಅಮರನಾಥ ಗುಹೆಯ ದೇಗುಲಕ್ಕೆ 12 ಕಿಮೀ ಪ್ರಯಾಣವನ್ನು ಕೈಗೊಂಡಿದ್ದಾರೆ. 62 ದಿನಗಳ ಯಾತ್ರೆಯು ಆಗಸ್ಟ್ 31 ರಂದು ಮುಕ್ತಾಯಗೊಳ್ಳಲಿದೆ. ಇದನ್ನೂ ಓದಿ: ಶಿಕ್ಷಣ ಸಚಿವರ ತವರಿನಲ್ಲಿ ಛತ್ರಿ ಹಿಡಿದು ಪಾಠ ಕೇಳುತ್ತಿದ್ದಾರೆ ಮಕ್ಕಳು!

ಹಿಮಾಲಯದ ಎತ್ತರದ ಗುಹೆಯಲ್ಲಿ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಶಿವಲಿಂಗದ ದರ್ಶನ ಪಡೆಯಲು ಲಕ್ಷಾಂತರ ಯಾತ್ರಿಕರು ಹೊರಟಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article