ನವದೆಹಲಿ: ಮಾನವೀಯತೆ, ಟೀಮ್‌ವರ್ಕ್‌ಗೆ ಅದ್ಭುತ ಉದಾಹರಣೆ. ಉತ್ತರಕಾಶಿ ಸುರಂಗ ರಕ್ಷಣಾ ಕಾರ್ಯಾಚರಣೆಯಲ್ಲಿ (Uttarakhand Tunnel Rescue Operation) ಭಾಗಿಯಾಗಿದ್ದ ಎಲ್ಲಾ ಜನರಿಗೆ ನಾನು ನಮಸ್ಕರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ.
ಸುರಂಗದ ಒಳಗಡೆ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ ನಡೆಸಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಕೃತಜ್ಞತೆ ಸಲ್ಲಿಸಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹೆಜ್ಜೆ ಹೆಜ್ಜೆಗೂ ಅಡೆತಡೆ – ಉತ್ತರಕಾಶಿ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ
Advertisement
उत्तरकाशी में हमारे श्रमिक भाइयों के रेस्क्यू ऑपरेशन की सफलता हर किसी को भावुक कर देने वाली है।
टनल में जो साथी फंसे हुए थे, उनसे मैं कहना चाहता हूं कि आपका साहस और धैर्य हर किसी को प्रेरित कर रहा है। मैं आप सभी की कुशलता और उत्तम स्वास्थ्य की कामना करता हूं।
यह अत्यंत…
— Narendra Modi (@narendramodi) November 28, 2023
Advertisement
ಪೋಸ್ಟ್‌ನಲ್ಲಿ ಏನಿದೆ?
ನಮ್ಮ ಕಾರ್ಮಿಕ ಬಂಧುಗಳ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ. ನಿಮ್ಮ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಸುರಂಗದಲ್ಲಿ ಸಿಕ್ಕಿಬಿದ್ದ ಸ್ನೇಹಿತರಿಗೆ ಹೇಳುತ್ತೇನೆ. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣೆಗೆ ವರವಾಯ್ತು ನಿಷೇಧಿತ ರ‍್ಯಾಟ್ ಹೋಲ್ ಮೈನಿಂಗ್ – ನಿಷೇಧಿಸಿದ್ದು ಯಾಕೆ?
Advertisement
ನಾನು ನಿಮ್ಮೆಲ್ಲರಿಗೂ ಒಳ್ಳೆಯ ಮತ್ತು ಉತ್ತಮ ಆರೋಗ್ಯವನ್ನು ಬಯಸುತ್ತೇನೆ. ದೀರ್ಘಾವಧಿಯ ಕಾಯುವಿಕೆಯ ನಂತರ ನಮ್ಮ ಈ ಸ್ನೇಹಿತರು ಈಗ ತಮ್ಮ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ತುಂಬಾ ತೃಪ್ತಿಯ ವಿಷಯ,
Advertisement
ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯವನ್ನು ಸಾಕಷ್ಟು ಪ್ರಶಂಸಿನೀಯ. ಅವರ ಶೌರ್ಯ ಮತ್ತು ಸ್ಥೈರ್ಯ ನಮ್ಮ ಕಾರ್ಮಿಕ ಬಂಧುಗಳಿಗೆ ಹೊಸ ಬದುಕನ್ನು ನೀಡಿದೆ.