ಬೆಂಗಳೂರು: ಮಾಜಿ ಸಚಿವ ಅಂಬರೀಶ್ ಅವರ ಮೃತದೇಹವನ್ನು ಏರ್ ಲಿಫ್ಟ್ ಮೂಲಕ ಮಂಡ್ಯಕ್ಕೆ ತೆಗೆದುಕೊಂಡು ಹೋಗಲು ರಕ್ಷಣಾ ಇಲಾಖೆ ಅನುಮತಿ ನೀಡಿದೆ.
ಕಂಠೀರವ ಸ್ಟೇಡಿಯಂನಲ್ಲಿ ಅಂಬರೀಶ್ ಪಾರ್ಥಿವ ಶರೀರದ ದರ್ಶನಗೈದು ಪ್ರತಿಕ್ರಿಯಿಸಿದ ಸಿಎಂ, ಮಂಡ್ಯ ಜಿಲ್ಲೆಯ ಅಭಿಮಾನಿಗಳು ತವರಿಗೆ ಮೃತ ಶರೀರವನ್ನು ತರುವಂತೆ ಆಗ್ರಹಿಸಿದ್ದಾರೆ. ಹೀಗಾಗಿ ಸೇನೆಯ ಹೆಲಿಕಾಪ್ಟರ್ ನೀಡುವಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದರು.
ನನ್ನ ಮನವಿಗೆ ಸ್ಪಂದಿಸಿದ ಸಚಿವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಅರ್ಧಗಂಟೆಯಲ್ಲಿ ತಿಳಿಸುತ್ತೇನೆ ಎಂದಿದ್ದಾರೆ. ದಯವಿಟ್ಟು ಮಂಡ್ಯ ಜನರು ಆಕ್ರೋಶ ಮಾಡಬೇಡಿ ಎಂದು ಸಿಎಂ ಮನವಿ ಮಾಡಿದ್ದರು.
ಮಂಡ್ಯದ ವಿಶ್ವೇಶ್ವರಯ್ಯ ಸ್ಟೇಡಿಯಂ ನಲ್ಲಿ ಇಂದು ಸಂಜೆ 4 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ತದನಂತರ ಕಂಠೀರವ ಸ್ಟೇಡಿಯಂಗೆ ತಂದು ಮೆರವಣಿಗೆ ಮೂಲಕ ಕಂಠೀರವ ಸ್ಟುಡಿಯೋಗೆ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಸಿಎಂ ಮಾಹಿತಿ ನೀಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv