ಮುಂಬೈ: ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್‌ಕಿಂಗ್ಸ್ ತಂಡದ ಸ್ಟಾರ್ ಕ್ರಿಕೆಟರ್ ಅಂಬಾಟಿ ರಾಯುಡು ಐಪಿಎಲ್ ಆವೃತ್ತಿಗೆ ಗುಡ್‌ಬೈ ಹೇಳುತ್ತಿರುವುದಾಗಿ ಟ್ಟಿಟ್ಟರ್ ಮೂಲಕ ಘೋಷಿಸಿ ಬಳಿಕ, ಕೆಲವೇ ಗಂಟೆಯಲ್ಲಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.
ಸಿಎಸ್‌ಕೆ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ರಾಯುಡು ಇದ್ದಕ್ಕಿದ್ದಂತೆ ಐಪಿಎಲ್‌ಗೆ ಗುಡ್‌ಬೈ ಹೇಳುತ್ತಿರುವುದಾಗಿ ಘೋಷಿಸಿ ಸಾಕಷ್ಟು ಕ್ರಿಕೆಟ್ ಅಭಿಮಾನಿಗಳಲ್ಲಿ ಬೇಸರ ತರಿಸಿದ್ದು, ಇಂದಿನ ಟ್ವಿಟ್ಟರ್ ಟಾಪ್ ಟ್ರೆಂಡಿಗ್‌ನಲ್ಲೂ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು, ಅವರಿಗೆ ಶುಭ ಹಾರೈಸುತ್ತಿದ್ದಾರೆ. ಇದನ್ನೂ ಓದಿ: ಟೀಕೆಗಳ ನಡುವೆಯೂ ಮೈಲಿಗಲ್ಲು ಸಾಧಿಸಿದ ಕಿಂಗ್ ಕೊಹ್ಲಿ
Advertisement
Advertisement
ಈ ಕುರಿತು ಟ್ವೀಟ್ ಮಾಡಿರುವ ರಾಯುಡು, ಇದು ನನ್ನ ಕೊನೆಯ ಐಪಿಎಲ್ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಕಳೆದ 13 ವರ್ಷಗಳಿಂದ 2 ಶ್ರೇಷ್ಠ ತಂಡಗಲ್ಲಿ ಅದ್ಭುತ ಸಮಯವನ್ನು ಕಳೆದಿದ್ದೇನೆ. ಈ ಕ್ರಿಕೆಟ್ ಪಯಣಕ್ಕೆ ಅವಕಾಶ ಮಾಡಿಕೊಟ್ಟ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದರು. ಆ ಬಳಿಕ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಸಿಎಸ್‌ಕೆ ತಂಡದ ಸಿಇಒ ಕಾಶಿ ವಿಶ್ವನಾಥ್ ಸಹ ಅವರು ಐಪಿಎಲ್‌ನಿಂದ ನಿವೃತ್ತಿಯಾಗುವುದಿಲ್ಲ ಎಂದು ಹೇಳಿದ್ದಾರೆ.
Advertisement
2010ರಲ್ಲಿ 6.75 ಕೋಟಿ ರೂ.ಗಳಿಗೆ ಖರೀದಿಯಾಗಿದ್ದ ಅಂಬಾಟಿ ರಾಯುಡು ಮುಂಬೈ ಇಂಡಿಯನ್ಸ್ ಮೂಲಕ ಐಪಿಎಲ್ ಪ್ರವೇಶಿಸಿದ್ದರು. ತಮ್ಮ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲೇ 12 ಪಂದ್ಯಗಳಲ್ಲಿ 271 ರನ್‌ಗಳಿಸುವ ಮೂಲಕ ಉತ್ತಮ ಪ್ರದರ್ಶನ ನೀಡಿದ್ದರು. ಇದನ್ನೂ ಓದಿ: RCB ಫ್ಯಾನ್ಸ್‌ಗಳಿಗೆ ಭರ್ಜರಿ ಗುಡ್‌ನ್ಯೂಸ್ – ಎಬಿಡಿ ಮತ್ತೆ ಎಂಟ್ರಿ
Advertisement
Thank You Champion ???????? #ambatirayudu #Rayudu #CSK #Dhoni pic.twitter.com/CuqrCHzDVs
— Priyanshu sharma (@priyanshu_077) May 14, 2022
ಈವರೆಗೆ ಐಪಿಎಲ್‌ನಲ್ಲಿ 187 ಪಂದ್ಯಗಳನ್ನಾಡಿರುವ ರಾಯುಡು 4,187 ರನ್‌ಗಳನ್ನು ಪೇರಿಸಿದ್ದಾರೆ. 296-28 ಸರಾಸರಿ ಉಳಿಸಿಕೊಂಡಿದ್ದು, 127.26 ಸ್ಟ್ರೈಕ್ ರೇಟ್‌ನಲ್ಲಿದ್ದಾರೆ.
2010 ರಿಂದ 2017ರ ವರೆಗೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ರಾಯುಡು, 2018ರಿಂದ ಚೆನ್ನೈ ಸೂಪರ್‌ಕಿಂಗ್ಸ್ ಪ್ರವೇಶಿಸಿದರು. ಸಾಕಷ್ಟು ಪಂದ್ಯಗಳಲ್ಲಿ ಸಿಎಸ್‌ಕೆ ನಾಯಕ ಎಂ.ಎಸ್.ಧೋನಿ ಅವರೊಂದಿಗೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ, ಮಧ್ಯಮಕ್ರಮಾಂಕದಲ್ಲಿ ತಂಡಕ್ಕೆ ಆಧಾರವಾಗಿದ್ದರು.