ಮುಂಬೈ: ಟೀಂ ಇಂಡಿಯಾ ಆಟಗಾರ ಅಂಬಟಿ ರಾಯುಡು ಶನಿವಾರ ಪ್ರಥಮ ದರ್ಜೆ ಕ್ರಿಕೆಟ್‍ಗೆ ವಿದಾಯ ಹೇಳಿದ್ದಾರೆ.
ಆಂಧ್ರಪ್ರದೇಶದ ಗುಂಟೂರು ಮೂಲದವರಾದ ರಾಯುಡು ತಮ್ಮ 33ನೇ ವಯಸ್ಸಿಗೆ ಪ್ರಥಮ ದರ್ಜೆ ಕ್ರಿಕೆಟ್ ಗೆ ವಿದಾಯ ಹೇಳುವ ಮೂಲಕ ಸೀಮಿತ ಓವರ್‍ಗಳ ಪಂದ್ಯಗಳತ್ತ ಗಮನ ಹರಿಸಲು ಚಿಂತನೆ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಹೈದರಾಬಾದ್ ಕ್ರಿಕೆಟ್ ಸಂಸ್ಥೆ, ರಾಯುಡು ರಣಜಿ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸದೆ, ಏಕದಿನ ಮತ್ತು ಟಿ20 ಟೂರ್ನಿಗಳಲ್ಲಿ ಮಾತ್ರ ಆಡಲಿದ್ದಾರೆ ಎಂದು ತಿಳಿಸಿದೆ.
Advertisement
Advertisement
ಸೀಮಿತ ಓವರಗಳ ಕ್ರಿಕೆಟ್ ಮೇಲೆ ಹೆಚ್ಚು ಗಮನ ನೀಡಲು ಈ ನಿರ್ಣಯ ಕೈಗೊಂಡಿದ್ದು, ನನಗೆ ಬೆಂಬಲ ನೀಡುತ್ತಿರುವ ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಹಾಗೂ ಬಿಸಿಸಿಐಗೆ ಆಭಾರಿಯಾಗಿದ್ದೇನೆ ಎಂದು ರಾಯುಡು ತಿಳಿಸಿದ್ದಾರೆ.
Advertisement
ಕಳೆದ ಕೆಲ ದಿನಗಳ ಹಿಂದೆಯಷ್ಟೇ ರಾಯುಡು ಆಟವನ್ನು ಮೆಚ್ಚಿಕೊಂಡಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, 2019 ರ ವಿಶ್ವಕಪ್ ಗೆ ತಂಡದ ಮಧ್ಯಮ ಕ್ರಮಾಂಕದ ಸ್ಥಾನವನ್ನು ರಾಯುಡು ಉತ್ತಮವಾಗಿ ನಿರ್ವಹಣೆ ಮಾಡಬಲ್ಲರು ಎಂದು ಹೇಳುವ ಮೂಲಕ ರಾಯುಡು ಪರ ಬ್ಯಾಟ್ ಬೀಸಿದ್ದರು.
Advertisement
2018 ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದ ರಾಯುಡು ಉತ್ತಮ ಪ್ರದರ್ಶನವನ್ನು ನೀಡಿದ್ದು, 43.00 ಸರಾಸರಿಯಲ್ಲಿ 602 ರನ್ ಗಳಿಸಿದ್ದರು. ಆದರೆ ಯೋಯೋ ಟೆಸ್ಟ್ ಪಾಸ್ ಮಾಡಲು ವಿಫಲರಾಗಿದ್ದ ರಾಯುಡು ಬಳಿಕ ಇಂಗ್ಲೆಂಡ್ ಟೂರ್ನಿಯಿಂದ ಹೊರ ಉಳಿದಿದ್ದರು. ಆದರೆ ಏಷ್ಯಾಕಪ್‍ಗೆ ಕಮ್‍ಬ್ಯಾಕ್ ಮಾಡುವ ಮೂಲಕ ಟೂರ್ನಿಯಲ್ಲಿ 6 ಇನ್ನಿಂಗ್ಸ್ ಗಳಲ್ಲಿ 43.75 ಸರಾಸರಿಯಲ್ಲಿ 175 ರನ್ ಗಳಿಸಿ ಮಿಂಚಿದ್ದರು. ಅಲ್ಲದೇ ವಿಂಡೀಸ್ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಒಂದು ಶತಕ, ಅರ್ಧ ಶತಕ ಬಾರಿಸಿದ್ದರು.
ರಾಯುಡು ಇದುವರೆಗೂ 97 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯ ಆಡಿದ್ದು, 16 ಶತಕ, 34 ಅರ್ಧಶತಕಗಳೊಂದಿಗೆ 6,151 ರನ್ ಸಿಡಿಸಿದ್ದಾರೆ. ಲೀಸ್ಟ್ `ಎ’ನಲ್ಲಿ 150 ಪಂದ್ಯಗಳನ್ನು ಆಡಿದ್ದು, 05 ಶತಕ, 36 ಅರ್ಧಶತಕಗಳೊಂದಿಗೆ 4,856 ರನ್ ಗಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv