– ಎರಡು ಸಮುದಾಯದ ಬೀದಿಯಲ್ಲೂ ಕಲ್ಲು ತೂರಾಟ
ಮೈಸೂರು: ಅಂಬೇಡ್ಕರ್ ನಾಮಫಲಕ (Ambedkar Nameplate) ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಮನೆಗಳಿಗೆ ಕಲ್ಲು ತೂರಾಟ (Stone Pelting) ನಡೆಸಿ ಹಾನಿಗೊಳಿಸಿದ ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡು (Nanjangud) ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.
- Advertisement 2
ನಾಮಫಲಕ ವಿಚಾರವಾಗಿ ಕೆಲ ಕಿಡಿಗೇಡಿಗಳಿಂದ ಹಲ್ಲರೆ (Hallare) ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘರ್ಷಣೆಯ ಪರಿಣಾಮ ಎರಡೂ ಸಮುದಾಯದ ಬೀದಿಯಲ್ಲೂ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಜಖಂಗೊಂಡಿವೆ. ಇದನ್ನೂ ಓದಿ: ಗೋಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ: ಜೆಡಿಎಸ್ ವಾಗ್ದಾಳಿ
- Advertisement 3
- Advertisement 4
ಇನ್ನು ಕಲ್ಲು ತೂರಾಟದಲ್ಲಿ ಪೊಲೀಸರಿಗೂ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದಾರೆ. ಇದನ್ನೂ ಓದಿ: ಅಸ್ವಾಭಾವಿಕ ಲೈಂಗಿಕ ಬೇಡಿಕೆ ನಿರಾಕರಿಸಿದ್ದಕ್ಕೆ ಸ್ನೇಹಿತನನ್ನೇ ಕೊಲೆಗೈದ 20ರ ಯುವಕ