ಬೆಂಗಳೂರು: ಕಳೆದ ಕೆಲವು ದಿನಗಳಿಂದ ನನ್ನ ಬಗ್ಗೆ ಏನೇನೂ ತೋರಿಸಲಾಗುತ್ತಿದೆ. ಮಾಧ್ಯಮಗಳಲ್ಲಿ ಜನಾರ್ದನ ರೆಡ್ಡಿ ಹೈದರಾಬಾದ್ ನಲ್ಲಿದ್ದಾರೆ, ಅಲ್ಲಿದ್ದಾರೆ ಅಂತಾ ತೋರಿಸಲಾಗುತ್ತಿದೆ. ನಾನು ಎಲ್ಲಿಯೂ ಹೋಗಿಲ್ಲ ಬೆಂಗಳೂರಿನಲ್ಲಿಯೇ ಕುಳಿತು ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದೆ. ನಮ್ಮ ವಕೀಲರು ನೋಟಿಸ್ ಬರೋವರೆಗೂ ಯಾವುದರ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ ಎಂದು ಸಲಹೆ ನೀಡಿದ್ದರು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.
ನಾಲ್ಕು ದಿನಗಳ ಬಳಿಕ ಇಂದು ತಮ್ಮ ವಕೀಲ ಚಂದ್ರಶೇಖರ್ ಜೊತೆ ವಿಚಾರಣೆಗೆ ಹಾಜರಾಗುವ ಮೊದಲು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ಬಗ್ಗೆ ಊಹಾಪೋಹ ಸುದ್ದಿಗಳು ಹರಿದಾಡುತ್ತಿದ್ದವು. ಈ ಸಂಬಂಧ ಮಾಧ್ಯಮಗಳಿಗೆ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕೆಂದು ವಕೀಲರ ಸಲಹೆಯ ಮೇರೆಗೆ ಈ ವಿಡಿಯೋವನ್ನು ಮಾಡಿದ್ದೇನೆ ಅಂತ ಹೇಳಿದ್ರು.
Advertisement
Advertisement
ಪೊಲೀಸರಿಂದ ಕೆಟ್ಟ ಉದ್ದೇಶದಿಂದ ನನ್ನನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಲಾಗುತ್ತಿದೆ. ಮಾಧ್ಯಮಗಳಲ್ಲಿ ನನ್ನ ಬಗ್ಗೆ ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ಸಿಸಿಬಿ ಕಚೇರಿಗೆ ಹೋಗಿ ಸ್ಪಷ್ಟನೆ ನೀಡಲು ತೀರ್ಮಾನಿಸಿದಾಗ, ವಕೀಲರು ನಮಗೆ ಯಾವುದೇ ನೋಟಿಸ್ ನೀಡಿಲ್ಲ ಮತ್ತು ಎಫ್‍ಐಆರ್ ನಲ್ಲಿ ನಿಮ್ಮ ಹೆಸರಿಲ್ಲ. ಯಾವ ಕಾರಣಕ್ಕಾಗಿ ಸಿಸಿಬಿಗೆ ಹೋಗಬೇಕೆಂದು ಹೇಳಿದ್ದರು ಅಂತಾ ಅಂದ್ರು.
Advertisement
ಈ ಹಿನ್ನೆಲೆಯಲ್ಲಿ ನಾನು ಬೆಂಗಳೂರು ಮಹಾನಗರದಲ್ಲಿ ಉಳಿದುಕೊಂಡು ವಕೀಲರ ಸಲಹೆ ಪಡೆಯುತ್ತಿದ್ದೆ. ಶುಕ್ರವಾರ ನೋಟಿಸ್ ಜಾರಿಯಾಗಿದ್ದು, ಭಾನುವಾರ ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಲಾಗಿತ್ತು. ಆದ್ರೆ ನಾನು ಇಂದು ಸಿಸಿಬಿ ಕಚೇರಿಗೆ ತೆರಳಿ ಅಂಬಿಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಯನ್ನು ದಾಖಲಿಸಲಿದ್ದೇನೆ. ಡೀಲ್ ಪ್ರಕರಣದಲ್ಲಿ ನನ್ನ ಹಸ್ತಕ್ಷೇಪವಿಲ್ಲ. ಸಿಸಿಬಿ ಅಧಿಕಾರಿಗಳು ಮಾಧ್ಯಮಗಳ ದಿಕ್ಕನ್ನು ತಪ್ಪಿಸುವ ಪ್ರಯತ್ನ ಮಾಡಲಾಗುತ್ತಿದೆ. ನಾನು ಪೊಲೀಸ್ ಅಧಿಕಾರಿಯ ಮಗನಾಗಿದ್ದು, ಪೊಲೀಸರ ಮೇಲೆ ಅಪಾರ ಗೌರವ ಹೊಂದಿದ್ದೇನೆ. ಪೊಲೀಸರು ರಾಜಕೀಯ ಷಡ್ಯಂತ್ರಗಳಿಗೆ ಒಳಗಾಗದೇ ನ್ಯಾಯಸಮ್ಮತವಾಗಿ ಪ್ರಕರಣದ ತನಿಖೆಯನ್ನು ನಡೆಸಬೇಕೆಂದು ಕೋರುತ್ತೇನೆ ಎಂದು ಹೇಳಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews