ಬೆಂಗಳೂರು: ಆಂಬಿಡೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಬಿಬಿಎಂಪಿಯ ಶಿವಾಜಿನಗರ ಕಾರ್ಪೋರೇಟರ್ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಶಿವಾಜಿನಗರ ಕಾರ್ಪೋರೇಟರ್ ಫರೀದಾ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಆಂಬಿಡೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫರೀದಾ ಪತಿ ಇಸ್ತಿಯಾಕ್ ಅಹಮದ್ ಪಾತ್ರ ಕಂಡು ಬಂದಿದೆ ಎನ್ನಲಾಗುತ್ತಿದೆ. ಹೀಗಾಗಿ ಪೊಲೀಸರು ಇಸ್ತಿಯಾಕ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Advertisement
Advertisement
ಇಸ್ತಿಯಾಕ್ ಅಹಮದ್ ಮಾಜಿ ರೌಡಿಶೀಟರ್ ಹಾಗೂ ಮಾಜಿ ಕಾರ್ಪೋರೇಟರ್ ಆಗಿದ್ದಾನೆ. ಇದಲ್ಲದೇ ಆಂಬಿಡೆಂಟ್ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡುವಂತೆ ಶಾಸಕ ರೋಷನ್ ಬೇಗ್ ಅವರಿಗೆ ಹೇಳಿದ್ದ. ಇದರಿಂದಾಗಿ ಬೇಗ್ 2 ಕೋಟಿ ರೂಪಾಯಿಯನ್ನು ಆಂಬಿಡೆಂಟ್ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದರು. ಅಲ್ಲದೇ ಇದರ ದಾಖಲೆಗಳನ್ನು ಇಸ್ತಿಯಾಕ್ ತನ್ನ ಬಳಿಯೇ ಇರಿಸಿಕೊಂಡಿದ್ದ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.
Advertisement
ಪ್ರಭಾವಿ ವ್ಯಕ್ತಿಗಳಿಗೆ ಆಂಬಿಡೆಂಟ್ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡುವಂತೆ ಇಸ್ತಿಯಾಕ್ ಮನವೊಲಿಸುತ್ತಿದ್ದ. ಅವರಿಂದ ಹಣ ಹೂಡಿಕೆ ಮಾಡಿಸಿ, ಎಲ್ಲಾ ದಾಖಲೆಗಳನ್ನು ತನ್ನ ಮನೆಯಲ್ಲೇ ಸಂಗ್ರಹಿಸಿಟ್ಟುಕೊಳ್ಳುತ್ತಿದ್ದ ಎನ್ನುವ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭ್ಯವಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews