ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರಾಗಿದ್ದ ಅಂಬಿಕಾಪತಿ (Ambikapati) ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.
ಕಳೆದ ತಿಂಗಳು ಅಂಬಿಕಾಪತಿ ನಿವಾಸಕ್ಕೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಐಟಿ ರೇಡ್ (IT Raid) ವೇಳೆ ಅಂಬಿಕಾಪತಿ ಮನೆಯಲ್ಲಿ ಬರೋಬ್ಬರಿ 44 ಕೊಟಿ ರೂ. ಪತ್ತೆಯಾಗಿತ್ತು. ಈ ಘಟನೆಯಾದ ತಿಂಗಳಲ್ಲೇ ಅಂಬಿಕಾಪತಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇದೀಗ ಅಂಬಿಕಾಪತಿ ಮೃತದೇಹವನ್ನು ಕುಟುಂಬಸ್ಥರು ಆಸ್ಪತ್ರೆಯಿಂದ ಮನೆಗೆ ಕೊಂಡೊಯ್ದಿದ್ದಾರೆ. ಇದನ್ನೂ ಓದಿ: ಮಂಗಳವಾರ ನಿಗಮ ಮಂಡಳಿ ಪಟ್ಟಿ ಫೈನಲ್ ಸಾಧ್ಯತೆ
