ಬೆಳಗಾವಿ: ರೋಗಿಗಳಿಗೆ, ಅಪಘಾತದಲ್ಲಿ ಗಾಯಗೊಂಡವರಿಗೆ ಉಚಿತ ಸೇವೆಗಾಗಿ ಇರೋ 108 ಆಂಬುಲೆನ್ಸ್ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಪ್ರಕರಣವೊಂದು ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಹುಲಿಗೆಮ್ಮ ಬಾರ್ ಹಾಗೂ ರೆಸ್ಟೋರೆಂಟ್‍ನವರು ಆಂಬುಲೆನ್ಸ್ ಸೇವೆಯನ್ನು ದುರ್ಬಳಕೆ ಮಾಡಿಕೊಳ್ತಿದ್ದಾರೆ. ಬಾರ್ ಗೆ ಬಂದು ಟೈಟ್ ಆಗೋ ಕುಡುಕರನ್ನು ಸಾಗ ಹಾಕಲು ಆಂಬುಲೆನ್ಸ್ ಸೇವೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಸೇವೆ ಒದಗಿಸುವ ನಿಟ್ಟಿನಲ್ಲಿ ಆಂಬುಲೆನ್ಸ್ ಸಿಬ್ಬಂದಿ ಅನಿವಾರ್ಯವಾಗಿ ಸೇವೆ ನೀಡುತ್ತಿದ್ದಾರೆ. ವಾರಕ್ಕೆ ಮೂರ್ನಾಲ್ಕು ಬಾರಿ ಈ ರೀತಿ ಮಾಡುತ್ತಿದ್ದು, ಆರೋಗ್ಯ ಇಲಾಖೆ ಹಾಗೂ ಪೊಲೀಸರು ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇದೀಗ ಅಲ್ಲಿನ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.